NEWS

ಮೇ 6- ಸಂಜೆ ವೇಳೆಗೆ ರಾಜ್ಯದಲ್ಲಿ 20 ಹೊಸ ಕೊರೊನಾ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಾಗಲಕೋಟೆಯ ಬಾದಾಮಿಯಲ್ಲಿ ಇಂದು ಒಂದೇ ದಿನ 13 ಹೊಸ ಕೊರೊನಾ ಪಾಲಿಸಿಟಿವ್‌ ಸೇರಿ ರಾಜ್ಯದಲ್ಲಿ ಹೊಸದಾಗಿ 20 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ.

ಇವುಗಳಲ್ಲಿ 29 ಜನರು ಮೃತಪಟ್ಟಿದ್ದು, 345 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ. ಬೆಂಗಳೂರಿನಲ್ಲಿ ಎರಡು, ದಕ್ಷಿಣ ಕನ್ನಡಲ್ಲಿ ಮೂರು ಮತ್ತು ವಿಜಯಪುರ-ಕಲಬುರಗಿಯಲ್ಲಿಒಂದೊಂದು ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ 693 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 345 ಮಂದಿ ಗುಣಮುಖರಾಗಿದ್ದಾರೆ. ಇನ್ನು 319  ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 29 ಮಂದಿ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಯಾವುದೇ ಪಾಸಿಟಿವ್‌ಪ್ರಕರಣ ವರದಿಯಾಗಿಲ್ಲ.

ದೇಶದಲ್ಲಿ 49,436 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 49,436 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,695 ಮಂದಿ ಮೃತಪಟ್ಟಿದ್ದಾರೆ. 14,183 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 37,30,023 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,58,394 ಜನರು ಮೃತಪಟ್ಟಿದ್ದಾರೆ. 12,45,723 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
KSRTC ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದಿಂದ SSLC, PUC ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ನೀಟ್ ವ್ಯವಸ್ಥೆ ಕೊನೆಯಾದರೆ ಮಾತ್ರ ರಾಜ್ಯದ ಮಕ್ಕಳಿಗೆ ನ್ಯಾಯ ಸಿಗಲು ಸಾಧ್ಯ : ಮೋಹನ್ ದಾಸರಿ ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು?