ಬೆಂಗಳೂರು: ದುರುದ್ದೇಶ ಪೂರಿತ, ರಾಜಕೀಯ ಪಿತೂರಿಯ ಆರೋಪಗಳಿಗೆ ನಾನೆಂದೂ ಬೆನ್ನು ತೋರುವುದಿಲ್ಲ. ಅಪಪ್ರಚಾರಗಳು ನನ್ನ ನೈತಿಕ ಸ್ಥೈರ್ಯ ಕುಂದಿಸದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಸಿಎಂ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಇದನ್ನೂ ಓದಿರಿ: ರಾಜ್ಯ ಸರ್ಕಾರದ ಸೂಪರ್ ಸಿಎಂ ವಿಜಯೇಂದ್ರ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಒಂದು ವರ್ಷದಲ್ಲಿ ಐದು ಸಾವಿರ ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಗಭೀರ ಆರೋಪ ಮಾಡಿದ್ದಾರೆ ಅದಕ್ಕೆ ಈ ರೀತಿ ತಿರುಗೇಟು ನೀಡಿದ್ದಾರೆ.
ಕಟ್ಟು ಕಥೆ ಕಟ್ಟುವುದರಲ್ಲಿ , ಹಸೀ ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ಎತ್ತಿದ ಕೈ, ನನ್ನನ್ನು ಗುರಿಯಾಗಿಸಿಕೊಂಡು ಮೈಸೂರಿನಲ್ಲಿಂದು ಇಂಥದ್ದೇ ಒಂದು ಹಾಸ್ಯಾಸ್ಪದವಾದ ಜೊಳ್ಳು ಆರೋಪವನ್ನು ಮಾಡಲಾಗಿದೆ ಎಂದು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ಕಟ್ಟು ಕಥೆ ಕಟ್ಟುವುದರಲ್ಲಿ , ಹಸೀ ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ಎತ್ತಿದ ಕೈ, ನನ್ನನ್ನು ಗುರಿಯಾಗಿಸಿಕೊಂಡು ಮೈಸೂರಿನಲ್ಲಿಂದು ಇಂಥದ್ದೇ ಒಂದು ಹಾಸ್ಯಾಸ್ಪದವಾದ ಜೊಳ್ಳು ಆರೋಪವನ್ನು ಮಾಡಲಾಗಿದೆ. ದುರುದ್ದೇಶ ಪೂರಿತ,ರಾಜಕೀಯ ಪಿತೂರಿಯ ಆರೋಪಗಳಿಗೆ ನಾನೆಂದೂ ಬೆನ್ನು ತೋರುವುದಿಲ್ಲ. ಅಪಪ್ರಚಾರಗಳು ನನ್ನ ನೈತಿಕ ಸ್ಥೈರ್ಯ ಕುಂದಿಸದು.
— Vijayendra Yeddyurappa (@BYVijayendra) August 26, 2020