Thursday, October 31, 2024
NEWSನಮ್ಮರಾಜ್ಯರಾಜಕೀಯ

ಸಚಿವ ಸಂಪುಟ ವಿಸ್ತರಣೆ-ಪುನಾರಚನೆಯೋ: ಇನ್ನೂ ಸಿಕ್ಕಿಲ್ಲ ಗ್ರೀನ್‌ ಸಿಗ್ನಲ್‌ ಆದರೂ ಲಾಬಿ ಜೋರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಹೈ ಕಮಾಂಡ್‌ ಮಾತ್ರ ಗ್ರೀನ್‌ ಸಿಗ್ನಲ್‌ ನೀಡಿಲ್ಲ. ಈ ನಡುವೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ನಾಲ್ವರು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಆರಂಭಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಗೂ ಬಿಳಾಗಿ ಶಾಸಕ ಮುರುಗೇಶ್ ನಿರಾಣಿ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿಗಳು ನಮಗೆ ಆಶೀರ್ವಾದ ಮಾಡಿದ್ದೇ ಆದರೆ, ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ. ಇಲ್ಲದೇ ಹೋದರೂ ನಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ನಮ್ಮ ಕೆಲಸ ಮುಂದುವರಿಯಲಿದೆ. ಸಚಿವ ಸ್ಥಾನಕ್ಕಾಗಿ ನಾನು ಯಾರ ಮನೆ ಬಾಗಿಲಿಗೂ ಹೋಗುವುದಿಲ್ಲ. ಲಾಬಿಯನ್ನೂ ನಡೆಸುವುದಿಲ್ಲ ತಮ್ಮ ಸಚಿವ ಸಂಪುಟಕ್ಕೆ ನನ್ನನ್ನು ಸೇರ್ಪಡೆಗೊಳಿಸಿಕೊಳ್ಳಿ ಎಂದು ಎಂದಿಗೂ ಯಡಿಯೂರಪ್ಪ ಅವರ ಬಳಿ ಕೇಳಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ನವೆಂಬರ್ 25ರ ಬಳಿಕ ಸಂಪುಟ ವಿಸ್ತರಣೆ ಕುರಿತು ನಾನು ಪ್ರತಿಕ್ರಿಯೆ ನೀಡುತ್ತೇನೆ. ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡುವಂತೆ ಕೇಳಿತ್ತಿದ್ದೇನೆಂದಿದ್ದಾರೆ.

ಪ್ರಸ್ತುತ, 34 ಸದಸ್ಯರಿರುವ ಸಂಪುಟದಲ್ಲಿ ಇನ್ನು ಆರು ಹುದ್ದೆಗಳು ಖಾಲಿ ಇದ್ದು, ಇತ್ತೀಚೆಗೆ ನಾಮನಿರ್ದೇಶಿತ ಎಂಎಲ್ ಸಿಗಳಾದ ಎಂಟಿಬಿ ನಾಗರಾಜ್, ಆರ್. ಶಂಕರ್ ಮತ್ತು ಎ.ಎಚ್. ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ.

ಈ ನಡುವೆ ದೊಡ್ಡನಗೌಡ ಪಾಟೀಲ್ ಹಾಗೂ ಮುರುಗೇಶ್ ನಿರಾಣಿಯವರು ತಮಗೆ ಸಂಪುಟದಲ್ಲಿ ಸ್ಥಾನ ಸೇರ್ಪಡೆಗೊಳಿಸದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದು, ಪಕ್ಷಕ್ಕಾಗಿ ನಮ್ಮ ಕಾರ್ಯ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಪ್ರತಿಯೊಬ್ಬ ರಾಜಕಾರಣಿ ತಮ್ಮ ರಾಜಕೀಯ ಜೀವನದಲ್ಲಿ ಒಮ್ಮೆಯಾದರೂ ಸಚಿವನಾಗಬೇಕೆಂದು ಕನಸು ಕಾಣುತ್ತಾರೆ. ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಸಿಎಂ ನಿರ್ಧರಿಸುತ್ತಾರೆ. ಎಂದು ಶಾಸಕ ನಡಹಳ್ಳಿ ಹೇಳಿದ್ದು, ಈ ನಡುವೆ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲಾಗುತ್ತಿದೆ ಎಂಬುದನ್ನು ತಳ್ಳಿಹಾಕಿದ್ದಾರೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...