CrimeNEWSರಾಜಕೀಯ

ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಿಸಿದ ಸಿಬಿಐ ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಅಧಿಕಾರಿಗಳು ಎಫ್‍ಐಆರ್ ದಾಖಲಿಸಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ಡಿಕೆಶಿ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಇದೀಗ ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ಎಫ್‍ಆರ್ ದಾಖಲಿಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದ ಮೇಲೆ ಈ ಎಫ್‍ಐಆರ್ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಇಂದು ಬೆಳಗ್ಗೆ 8 ಗಂಟೆಗೆ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದು, ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಡಿಕೆಶಿಗೆ ಸೇರಿದ ಹಲವು ಕಡೆಗಳಲ್ಲಿ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತ ಡಿಕೆಶಿ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ. ರಾಜಕೀಯ ದುಷ್ಟತನದ ಪರಮಾವಧಿ ಎಂದು ಹೇಳುವ ಮೂಲಕ ದಾಳಿ ಖಂಡಿಸಿದ್ದಾರೆ.

ಅಷ್ಟೇ ಅಲ್ಲದೇ ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಸಿದ್ದರಾಮಯ್ಯ ಟ್ವಿಟ್ಟರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್‌ ಟ್ವೀಟ್‌ ಮಾಡಿ,  ಪ್ರತೀ ಬಾರಿ ಸಿಬಿಐ ದಾಳಿ ನಡೆದಾಗ ಅದು ರಾಜಕೀಯ ಪ್ರೇರಿತ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕರು, ಅಮಿತ್ ಶಾ ಅವರಿಗೆ 2 ವರ್ಷ ಗುಜರಾತ್ ಪ್ರವೇಶ ನಿಷೇಧಿಸಿದ್ದಾಗ, ಈಗಿನ ಆಂಧ್ರ ಪ್ರದೇಶದ ಸಿಎಂ ಸೇರಿ ಹಲವಾರು ಕಾಂಗ್ರೆಸ್ಸೇತರ ನಾಯಕರ ಮೇಲೆ ಸಿಬಿಐ ದಾಳಿ ನಡೆದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್ ಎಂಬುದು ಮರೆತುಹೋಯಿತೇ ಎಂದು ಪದರಶ್ನಿಸಿದ್ದಾರೆ.

ಸಿಬಿಐ, ಈಡಿ, ಐಟಿ ಸ್ವತಂತ್ರ ಸ್ವಾಯತ್ತ ಸಂಸ್ಥೆಗಳಾಗಿದ್ದು ಸಹಜ ಕಾನೂನು ಪ್ರಕ್ರಿಯೆ ಪಾಲಿಸುವ ಮೂಲಕ ತಮ್ಮ ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುವುದು ಸರಿಯಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಎಷ್ಟೇ ದೊಡ್ಡವರಾದರೂ ಕಾನೂನಿಗೆ ತಲೆ ಬಾಗಲೇ ಬೇಕು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು