NEWSಉದ್ಯೋಗದೇಶ-ವಿದೇಶ

ತನ್ನ ನೌಕರರಿಗೆ ಬೋನಸ್ ಘೊಷಿಸಿದ ಕೇಂದ್ರ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೊರೊನಾ ಸೋಂಕಿನಿಂದ ಆರ್ಥಿಕತೆ ಕುಸಿಗೊಂಡಿರುವ ನಡುವೆಯೂ ಕೇಂದ್ರ ಸರ್ಕಾರದ ಸಿ ಮತ್ತು ಡಿ ದರ್ಜೆ ನೌಕರರಿಗೆ ಬೋನಸ್ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ಬುಧವಾರ ತನ್ನ ನೌಕರರಿಗೆ 2019-2020ನೇ ಸಾಲಿನ ಬೋನಸ್ ಘೋಷಿಸಿದೆ. ಇದರ ಲಾಭವನ್ನು 30 ಲಕ್ಷ ಉದ್ಯೋಗಿಗಳು ಪಡೆಯಲಿದ್ದಾರೆ ಎಂದು ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ವಿವರಿಸಿದರು.

ಬೋನಸ್ ನ ಒಟ್ಟು 3,737 ಕೋಟಿ ರೂಪಾಯಿ ಆಗಿದ್ದು, ಕನಿಷ್ಠ 30 ಲಕ್ಷ ನಾನ್ ಗೆಜೆಟೆಡ್ ಉದ್ಯೋಗಿಗಳಿಗೆ ಇದರಿಂದ ಅನುಕೂಲವಾಗಲಿದೆ. ವಿಜಯ ದಶಮಿಗೆ ಮುಂಚೆ ಒಂದೇ ಸಲಕ್ಕೆ ಈ ಬೋನಸ್ ಮೊತ್ತವನ್ನು ವಿತರಣೆ ಮಾಡಲಾಗುತ್ತದೆ ಎಂದರು.

ಕೇಂದ್ರ ಸರ್ಕಾರದ ಈ ಬೋನಸ್ ನೀಡುವ ಕ್ರಮದಿಂದ ದೇಶದ ಆರ್ಥಿಕತೆಗೆ ಪುಷ್ಟಿ ಸಿಗುತ್ತದೆಂದು ಜಾವಡೇಕರ್ ನಿರೀಕ್ಷಿಸಿದ್ದಾರೆ. ಮುಂಬರುವ ಹಬ್ಬದ ಸೀಸನ್​ನಲ್ಲಿ ಜನರಿಗೆ ಕೊಳ್ಳುವ ಶಕ್ತಿ ಹೆಚ್ಚಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್...