NEWSನಮ್ಮರಾಜ್ಯ

ಚಾಮರಾಜನಗರ: ವೈದ್ಯಕೀಯ ಕಾಲೇಜು ವಸತಿ ನಿಲಯದಲ್ಲಿ ಚಿರತೆ ಪ್ರತ್ಯಕ್ಷ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ನಗರದ ಯಡಬೆಟ್ಟ ಬಳಿ ಇರುವ ಸರ್ಕಾರಿ ವೈದ್ಯಕೀಯ ಕಾಲೇಜು ವಸತಿ ನಿಲಯದಲ್ಲಿ ಎರಡು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ, ಸೋಮವಾರ ತಡರಾತ್ರಿ ಮತ್ತೆ ಪ್ರತ್ಯಕ್ಷವಾಗಿದೆ.

ಸರ್ಕಾರಿ ವೈದ್ಯಕೀಯ ಕಾಲೇಜು ವಸತಿ ನಿಲಯದಲ್ಲಿ ರಾತ್ರಿ ಚಿರತೆ ಕಾಣಿಸಿಕೊಂಡಿರುವುದು, ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ವೈದ್ಯರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗುವಂತೆ ಮಾಡಿದೆ.

ಕೆಲ ದಿನಗಳ ಹಿಂದೆ ವಸತಿ ನಿಲಯದ ಕಾರಿಡಾರಿನಲ್ಲಿ ಚಿರತೆ ಓಡಾಡಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಅದು ಸಾಮಾಜಿಕ ಜಾಲತಾಣದಲ್ಲೂ ವೈರಲ್‌ ಆಗಿತ್ತು. ಈಗ ಮತ್ತೆ ಸೋಮವಾರ ತಡರಾತ್ರಿ ಕಾಲೇಜು ಕ್ಯಾಂಪಸ್​​ ಹಿಂಭಾಗದಲ್ಲಿ ಕಾಣಿಸಿಕೊಂಡಿದ್ದು, ಎಲ್ಲರಲ್ಲೂ ಭಯವನ್ನುಂಟುಮಾಡಿದೆ.

ವಸತಿ ನಿಲಯಕ್ಕೆ ಕಿಟಕಿಯ ಮೂಲಕ ಒಳ ನುಗ್ಗಲು ಚಿರತೆ ಪ್ರಯತ್ನಿಸಿದ್ದು, ವಿದ್ಯಾರ್ಥಿಯಗಳು ತಮ್ಮ ಮೊಬೈಲ್‌ನಲ್ಲಿ ಈ ದೃಶ್ಯ ಸೆರೆ ಹಿಡಿದಿದ್ದಾರೆ. ಚಿರತೆಗೆ ಕಾಡಿನಲ್ಲಿ ಸರಿಯಾಗಿ ಆಹಾರ ಸಿಗದಿರುವುದರಿಂದ ಹುಡುಕಿಕೊಂಡು ಇತ್ತ ಬರುತ್ತಿದೆ ಎಂದು ಹೇಳಲಾಗುತ್ತಿದೆ. ಇನ್ನು ಕೂಡಲೇ ಅದನ್ನು ಸೆರೆ ಹಿಡಿಯುವಂತೆ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಹಾಗೂ ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ