Breaking NewsNEWSನಮ್ಮಜಿಲ್ಲೆವಿಜ್ಞಾನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅನಧಿಕೃತ ಕಟ್ಟಡಗಳ ತೆರವಿಗೆ ಕ್ರಮ

ಮಾಲೀಕರಿಗೆ ನೋಟಿಸ್ ಜಾರಿ ಮಾಡಿದ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ 

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ:  ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಿರುವವರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಈಗಾಗಲೇ ಕಟ್ಟಡ ನಿರ್ಮಾಣ ಮಾಡಿರುವ ಸಂಬಂಧ 8 ಮಂದಿಗೆ ಕಟ್ಟಡ ತೆರವುಗೊಳಿಸಲು  ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೇ ಇನ್ನು ಉಳಿದ 7 ಅಕ್ರಮ ಕಟ್ಟಡ ಸಂಬಂಧ ಕ್ರಮಕ್ಕೆ  ಮುಂದಾಗಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವನ್ನು ಸೂಕ್ಷ್ಮ ಪರಿಸರ ವಲಯವೆಂದು ಕೇಂದ್ರಸರ್ಕಾರ 2012ರ ಅಕ್ಟೋಬರ್ 4ರಂದು ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆ ಪ್ರಕಾರ ಪ್ರಸ್ತುತ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕರಡು ಅಧಿಸೂಚನೆ ದಿನಾಂಕ: 31-08-2010ರ ನಂತರ ಕಟ್ಟಡ ನಿರ್ಮಾಣ ಮಾಡಿರುವ 3 ಪ್ರಕರಣಗಳಲ್ಲಿ ಅನ್ಯಕ್ರಾಂತವಾಗಿರುವ ಆದೇಶವನ್ನು ರದ್ದುಪಡಿಸಲು ಮುಂದಾಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಪ್ರವಾಸೋದ್ಯಮ ಇಲಾಖೆ  ಅನುಮತಿಸಿರುವ ಯಾವುದೇ ಅನ್ಯಕ್ರಾಂತವಾಗದೇ ನಿರ್ಮಿಸಿರುವ 3 ಹೋಮ್‍ಸ್ಟೇ ಕಟ್ಟಡಗಳಿಗೆ ನೀಡಿರುವ ಅನುಮತಿಯನ್ನು ಹಿಂಪಡೆಯುವ ಆದೇಶಕ್ಕೆ ಜಿಲ್ಲಾಧಿಕಾರಿ  ಕ್ರಮ ತೆಗೆದುಕೊಂಡಿದ್ದಾರೆ. ಅನುಮತಿ ಪಡೆಯದ ಇನ್ನೊಂದು ಹೋಮ್ ಸ್ಟೇ ನಡೆಸದಂತೆ ಬೀಗಮುದ್ರೆ ಹಾಕಲಾಗಿತ್ತು. ಆದರೂ ಸಹ ಬೀಗಮುದ್ರೆ ಆದೇಶ ಉಲ್ಲಂಘಿಸಿ ಹೋಮ್ ಸ್ಟೇ ತೆರೆದು ಕಟ್ಟಡ ದುರಸ್ತಿ ಕಾರ್ಯ ಕೈಗೊಂಡಿದ್ದ ಹೋಮ್ ಸ್ಟೇ ಮಾಲೀಕರ ವಿರುದ್ಧ ಕ್ರಮಿನಲ್ ಮೊಕದ್ದಮೆ ಹೂಡಲು ಜಿಲ್ಲಾಧಿಕಾರಿ  ಮುಂದಾಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವನ್ನು ಸೂಕ್ಷ್ಮ ಪರಿಸರ ವಲಯವೆಂದು ಅಧಿಸೂಚನೆ ಹೊರಡಿಸಿದ್ದು, ಇದರ ಅನುಸಾರ ಬಂಡೀಪುರ ಕಾಡಂಚಿನ ಒಟ್ಟು 123 ಗ್ರಾಮಗಳು ಸೂಕ್ಷ್ಮ ಪರಿಸರ ವಲಯ ವ್ಯಾಪ್ತಿಗೆ ಬರುತ್ತಿದ್ದು, ಸದರಿ ಗ್ರಾಮಗಳಲ್ಲಿ ವಾಣಿಜ್ಯ ಉದ್ದೇಶಕ್ಕೆ ಚಟುವಟಿಕೆ ಕೈಗೊಳ್ಳಲು ಅವಕಾಶವಿರುವುದಿಲ್ಲ. ಆದಾಗಿಯೂ ಅಧಿಸೂಚನೆ ಉಲ್ಲಂಘಿಸಿ ಬೃಹತ್ ಕಟ್ಟಡ ನಿರ್ಮಾಣ ಮಾಡಲಾಗಿದೆ. ಪೂರ್ವಾನುಮತಿ ಪಡೆಯದೇ ನಿರ್ಮಿಸಲಾಗಿರುವ ಅಕ್ರಮ ಕಟ್ಟಡಗಳ ತೆರವಿಗೆ ಕ್ರಮ ವಹಿಸುವಂತೆ ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ವರದಿ ನೀಡುವಂತೆ ತಹಶೀಲ್ದಾರರಿಗೆ ಪತ್ರ ಬರೆದಿದ್ದರು. ತಹಸೀಲ್ದಾರರು ನೀಡಿದ ವರದಿ ಅನ್ವಯ ಕ್ರಮಕ್ಕೆ ಮುಂದಾಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ