ಚಾಮರಾಜನಗರ: ಬಿಜೆಪಿ ಹೈ ಕಮಾಂಡ್ ಒಪ್ಪಿಗೆ ಕೊಟ್ಟರೆ ಕಾಂಗ್ರೆಸ್ ಐದು ಶಾಸಕರಿಂದ ಕೂಡಲೇ ರಾಜೀನಾಮೇ ಕೊಡಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ಹೊಸ ಬಾಂಬ್ ಸಿಡಿದ್ದಾರೆ.
ಇಂದು ಚಾಮರಾಜನಗರದಲ್ಲಿ ಕೈಗೊಂಡಿರುವ ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸಂಪರ್ಕದಲ್ಲಿ 22 ಜನ ಕಾಂಗ್ರೆಸ್ ಶಾಸಕರು ಇದ್ದಾರೆ. ಅವರೆಲ್ಲ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಸೇರಲು ಸಿದ್ಧರಿದ್ದಾರೆ. ಹೀಗಾಗಿ ಬಿಜೆಪಿ ಹೈ ಕಮಾಂಡ್ ಒಪ್ಪಿದರೆ ಈ ಕೂಡಲೇ ಐದು ಮಂದಿ ಶಾಸಕರ ರಾಜೀನಾಮೆ ಕೊಡಿಸುತ್ತೇನೆ ಎಂದು ಹೇಳಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇನ್ನು ಕಾಂಗ್ರೆಸ್ ಮುಳುಗುತ್ತಿರುವ ಹಡಗು ಅದನ್ನು ಹತ್ತಲು ಯಾರು ಇಷ್ಟ ಪಡುತ್ತಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಬಿ.ಎಸ್. ಯಡಿಯೂರಪ್ಪ ನಮ್ಮ ನಾಯಕರು ಸರ್ಕಾರ ರಾಜ್ಯದಲ್ಲಿ ಸುಭದ್ರವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇತ್ತ ಪಕ್ಷದೊಳಗೆ ಕುದಿಮೌನವಿದ್ದು, ಉತ್ತರ ಕರ್ನಾಟಕದ ಹಲವು ಮಂದಿ ಶಾಸಕರು ಬಿಎಸ್‌ವೈ ನಡೆಯಿಂದ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಇವರು ರಾಜ್ಯದಲ್ಲಿ ಬಿಜೆಪಿ ಸರ್ಕಾರದಲ್ಲಿ ಸಿಎಂ ಬದಲಾವಣೆ ಆಗಲಿ ಎಂಬ ಬೇಡಿಕೆಯನ್ನು ಹೈ ಕಮಾಂಡ್ ಬಳಿ ಇಡಲಿದ್ದಾರೆ ಎಂಬ ಮಾಹಿತಿಯೂ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail