ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಜಿ.ಪಂ. ಕ್ಷೇತ್ರದ ಸದಸ್ಯರಾದ ಎಂ. ಅಶ್ವಿನಿ ಚಾಮರಾಜನಗರ ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮೈಸೂರು ವಿಭಾಗೀಯ ಪ್ರಾದೇಶಿಕ ಆಯುಕ್ತಎನ್. ಜಯರಾಮ್ ಅಧ್ಯಕ್ಷತೆಯಲ್ಲಿ ಅಧ್ಯಕ್ಷರ ಚುನಾವಣೆ ಸಂಬಂಧ ಸಭೆ ನಡೆಯಿತು. ಎಂ. ಅಶ್ವಿನಿ ಅವರೊಬ್ಬರೆ ನಾಮಪತ್ರ ಸಲ್ಲಿಕೆ ಮಾಡಿದ್ದು, ನಾಮಪತ್ರ ಕ್ರಮಬದ್ಧವಾಗಿರುವ ಹಿನ್ನೆಲೆಯಲ್ಲಿ ಅಶ್ವಿನಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಪ್ರಾದೇಶಿಕ ಆಯುಕ್ತರು ಘೋಷಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ನೂತನ ಅಧ್ಯಕ್ಷೆ ಅಶ್ವಿನಿ ಮಾತನಾಡಿ ಕುಡಿಯುವ ನೀರು, ನೈರ್ಮಲ್ಯ ಸ್ವಚ್ಛತೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಗಮನ ಹರಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
ಮೈಸೂರು ವಿಭಾಗೀಯ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾದ ಕೆ.ಎಂ. ಗಾಯಿತ್ರಿ, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್ ಇತರರು ಹಾಜರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail