Vijayapatha – ವಿಜಯಪಥ
Saturday, November 2, 2024
CrimeNEWSದೇಶ-ವಿದೇಶ

ತ.ನಾಡಿನ ಅಚಂಕುಲಂನ ಪಟಾಕಿ ಕಾರ್ಖಾನೆ ಸ್ಫೋಟ ದುರಂತದಲ್ಲಿ ಗರ್ಭಿಣಿ ಸೇರಿ 19ಮಂದಿ ಮೃತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಚೆನ್ನೈ: ತಮಿಳುನಾಡಿನ ಚೆನ್ನೈನಿಂದ 500 ಕಿಲೋಮೀಟರ್ ದೂರದಲ್ಲಿರುವ ವಿರುಧ್‌ನಗರ ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ಸಂಭವಿಸಿದ ಸ್ಫೋಟ ದುರಂತದಿಂದ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಇನ್ನು 30ಕ್ಕೂ ಅಧಿಕ ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಿನ್ನೆ ಮಧ್ಯಾಹ್ನ 1.30ರ ಸುಮಾರಿಗೆ ತಮಿಳುನಾಡಿನ ವಿರುಧ್‌ನಗರದ ಅಚಂಕುಲಂ ಗ್ರಾಮದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಗರ್ಭಿಣಿ, ವಿದ್ಯಾರ್ಥಿಗಳು ಸೇರಿದಂತೆ 19 ಶವಗಳನ್ನು ಹೊರತೆಗೆಯಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ 30ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಸಾಯನಿಕಗಳನ್ನು ಬೆರೆಸುವಾಗ ಉಂಟಾಗುವ ಘರ್ಷಣೆಯೂ ಸ್ಪೋಟಕ್ಕೆ ಕಾರಣವಾಗಿದೆ ಎಂಬುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಸ್ಪೋಟದಿಂದ 10 ಕೊಠಡಿಗಳು ನಾಶವಾಗಿವೆ. ಘಟನೆ ನಡೆದಾಗ ಸುಮಾರು ಐವತ್ತು ಕಾರ್ಮಿಕರು ಒಳಗಡೆ ಇದ್ದರು ಎಂದು ಜಿಲ್ಲೆಯ ಅಗ್ನಿ ಶಾಮಕ ಅಧಿಕಾರಿ ಗಣೇಶ್ ಹೇಳಿದ್ದಾರೆ. ಫ್ಯಾಕ್ಟರಿಗೆ ಪರವಾನಗಿ ನೀಡಿದ ಶಂತನ ಮಾರಿ ಸೇರಿದಂತೆ ಪೊಲೀಸರು ಮೂವರ ವಿರುದ್ಧ ಕೇಸು ದಾಖಲಿಸಿದ್ದಾರೆ.

ಸ್ಪೋಟದ ತೀವ್ರತೆ ಎಷ್ಟರ ಮಟ್ಟಿಗೆ ಇತ್ತೆಂದರೆ 9 ಮಂದಿ ಸಜೀವ ದಹನವಾಗಿದ್ದಾರೆ. ಇನ್ನು 9 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಫ್ಯಾಕ್ಟರಿಯ ಸುಮಾರು ಹದಿನೈದು ಕೊಠಡಿಗಳು ಸಂಪೂರ್ಣ ಹಾನಿಗೀಡಾಗಿದೆ. 13 ಕೊಠಡಿಗಳು ಭಾಗಶಃ ಹಾನಿಗೊಳಗಾಗಿವೆ ಎಂದು ತಿಳಿದು ಬಂದಿದೆ.

ಘಟನೆ ಬಳಿಕ ಹೇಳಿಕೆ ಬಿಡುಗಡೆ ಮಾಡಿರುವ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಪಟಾಕಿ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುವಾಗ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಇನ್ನು ಬೇಸಿಗೆಕಾಲ ಆರಂಭವಾಗುವುದರಿಂದ ಉತ್ಪಾದಕರು ಸೂಕ್ತ ಎಚ್ಚರಿಕೆಯೊಂದಿಗೆ ಭದ್ರತೆ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.

ಇದರ ಜತೆಗೆ ಮುನ್ನೆಚ್ಚರಿಕಾ ಭದ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಇನ್ನುಮುಂದೆ ಕಾಲಕಾಲಕ್ಕೆ ಪಟಾಕಿ ಕಾರ್ಖಾನೆಗಳನ್ನು ಪರಿಶೀಲಿಸುತ್ತಿರಬೇಕು ಎಂದು ಆದೇಶ ನೀಡಿದ್ದಾರೆ.

ಮೃತಪಟ್ಟ ಕುಟುಂಬಸ್ಥರಿಗೆ ಪ್ರಧಾನಿ ಸಾಂತ್ವನ
ಘಟನೆ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ನೋವು ವ್ಯಕ್ತಪಡಿಸಿದ್ದು, ತಮಿಳುನಾಡಿನ ವಿರುಧ್‌ ನಗರದ ಪಟಾಕಿ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅವಘಡದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಈ ಸಂದರ್ಭದಲ್ಲಿ ನಾನು ಸಾಂತ್ವನ ಹೇಳುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇನೆ. ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ