NEWSಉದ್ಯೋಗದೇಶ-ವಿದೇಶರಾಜಕೀಯ

ದಂತಚೋರ ವೀರಪ್ಪನ್ ಪುತ್ರಿಗೆ ಬಿಜೆಪಿಯಲ್ಲಿ ಉನ್ನತ ಹುದ್ದೆ

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ಕುಖ್ಯಾತ ದಂತಚೋರ, ಗಂಧದ ಮರದ ಕಳ್ಳ  ವೀರಪ್ಪನ್  ಪುತ್ರಿ ವಿದ್ಯಾ ರಾಣಿ ಅವರನ್ನು ತಮಿಳುನಾಡಿನ ಬಿಜೆಪಿ ಯುವ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ರಾಜ್ಯಮುಖಂಡರು ತಿಳಿಸಿದ್ದಾರೆ.

ದಿವಂಗತ ಮುಖ್ಯಮಂತ್ರಿ ಎಂ.ಜಿ.ರಾಮಚಂದ್ರನ್ ಅವರ ಸಂಬಂಧಿಗಳು, ಸಿನಿಮಾ ಹಿನ್ನೆಲೆ ವ್ಯಕ್ತಿಗಳನ್ನು ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ವಿವಿಧ ವಿಭಾಗಗಳ ಮುಖ್ಯ ಹುದ್ದೆಗಳಿಗೆ ನೇಮಕ ಮಾಡಲಾಗಿದೆ ಎಂದು ಬುಧವಾರ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಮುಂದಿನ ವರ್ಷ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ವರ್ಷದ ಮಾರ್ಚ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಎಲ್.ಮುರುಗನ್ ಅವರು ಪಕ್ಷವನ್ನು ರಾಜ್ಯದಲ್ಲಿ ಹೆಚ್ಚು ವಿಸ್ತರಿಸುವ ಬಗ್ಗೆ ಯೋಚಿಸಿದ್ದು ಈ ನಿಟ್ಟಿನಲ್ಲಿ ಈ ನೇಮಕಾತಿಗಳು ನಡೆದಿದೆ ಎಂದು ತಿಳಿದುಬಂದಿದೆ.

ಅದೇ ಸಮಯದಲ್ಲಿ, 2017 ರಲ್ಲಿ ಬಿಜೆಪಿಗೆ ಸೇರಿದ ಎಐಎಡಿಎಂಕೆ ಸಂಸ್ಥಾಪಕ ರಾಮಚಂದ್ರನ್ (ಎಂಜಿಆರ್)ದತ್ತು ಪುತ್ರಿ ಗೀತಾ ಮತ್ತು ಎಂಸಿ ಚಕ್ರಪಾಣಿ(ರಾಮಚಂದ್ರನ್ ಅವರ ಸಹೋದರ) ಅವರ ಮೊಮ್ಮಗ ಆರ್.ಪ್ರವೀಣ್ ಮತ್ತು ನಟಿ ರಾಧಾ ರವಿ ಅವರನ್ನು ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು