ಚಿಕ್ಕಬಳ್ಳಾಪುರ: ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸುವುದು ತಕ್ಷಣದ ಗುರಿಯಾಗಿದೆ ಎಂದು ವೈದ್ಯಕೀಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ ವತಿಯಿಂದ ಸ್ವಚ್ಛಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ 32 ಆಟೋ ಟಿಪ್ಪರ್‌ಗಳು ಹಾಗೂ 7 ಟ್ರಾಕ್ಟರ್‌ಗಳನ್ನು ಶನಿವಾರ ಜಿಲ್ಲಾಡಳಿತ ಮುಂಭಾಗದಲ್ಲಿ ಹಸ್ತಾಂತರಿಸಿ ಮಾತನಾಡಿದರು.
ರಾಜ್ಯವನ್ನು ಸಂಪೂರ್ಣವಾಗಿ ಸ್ವಚ್ಛ ಮತ್ತು ಸುಂದರ ಕರ್ನಾಟಕವನ್ನಾಗಿಸುವುದರಿಂದ ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಘನ ಮತ್ತು ದ್ರವ ತ್ಯಾಜ್ಯವನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕಾದ ಅಗತ್ಯ ಇರುವುದರಿಂದ ಗ್ರಾಮೀಣಾ ಪ್ರದೇಶದಲ್ಲಿ ಶುಚಿತ್ವ ನೈರ್ಮಲ್ಯದಲ್ಲಿ ಸುಸ್ಥಿರತೆಯನ್ನು ಸಾಧಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ, ಉಪಾಧ್ಯಕ್ಷರಾದ ನಿರ್ಮಲಾ ಮುನಿರಾಜು, ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಆರತಿ ಆನಂದ್, ಉಪ ಕಾರ್ಯದರ್ಶಿ ನೋಮೇಶ್, ಉಪವಿಭಾಗಾಧಿಕಾರಿ ರಘುನಂದನ್ ಮತ್ತಿತರರು ಉಪಸ್ಥಿತರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail