CrimeNEWSನಮ್ಮರಾಜ್ಯ

ಮಕ್ಕಳು ನೋಡಿಕೊಳ್ಳದಿದ್ದಕ್ಕೆ ನೊಂದ ವೃದ್ಧ ದಂಪತಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಮಕ್ಕಳು ನಮ್ಮನ್ನು ಕಡೆಗಾಲದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಮನನೊಂದ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊಸಮನೆ ಬಡಾವಣೆಯಲ್ಲಿ ನಡೆದಿದೆ.

ನಗರದ ಹೊಸಮನೆ ಬಡಾವಣೆ ನಿವಾಸಿಗಳಾದ ಗೋಪಾಲಕೃಷ್ಣ (74)  ಮತ್ತು ರತ್ನಾ (73) ವೃದ್ಧ ದಂಪತಿಯೇ  ಆತ್ಮಹತ್ಯೆಗೆ ಶರಣಾದವರು. ಗೋಪಾಲಕೃಷ್ಣ ಅವರು ನೇಣು ಬಿಗಿದುಕೊಂಡರೆ, ರತ್ನಾ ಅವರು ವಿಷ ಸೇವಿಸಿ ಕೊನೆಯುಸಿರೆಳೆದಿದ್ದಾರೆ.

ಲಾಕ್ ಡೌನ್‌ನಿಂದಾಗಿ ವೃದ್ಧರು ಹಣಕಾಸಿನ ತೊಂದರೆ ಎದುರಿಸುತ್ತಿದ್ದರು. ಈ ದಂಪತಿಯ ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು, ಅನಾರೋಗ್ಯಕ್ಕೆ ತುತ್ತಾಗಿದ್ದ ಇವರ ಯೋಗಕ್ಷೇಮವನ್ನು ಈ ಮಕ್ಕಳು ವಿಚಾರಿಸುತ್ತಿರಲಿಲ್ಲ. ಜತೆಗೆ ಯಾವುದೇ ನೆರವು ನೀಡುತ್ತಿರಲಿಲ್ಲ ಎಂದು ಅಕ್ಕಪಕ್ಕದವರಿಂದ ತಿಳಿದು ಬಂದಿದೆ.

ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಚಿಕಿತ್ಸೆಪಡೆಯಲು ಆರ್ಥಿಕ  ಸಮಸ್ಯೆ ಎದುರಾಗಿತ್ತು. ಇದರಿಂದ ತೀವ್ರವಾಗಿ ನೊಂದು, ಆತ್ಮಹತ್ಯೆಗೆ ಇಬ್ಬರೂ ನಿರ್ಧರಿಸಿ ಈರೀತಿ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಚಿಕ್ಕಮಗಳೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ