ಚಿಕ್ಕಮಗಳೂರು: ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 20ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬೀದಿ ಬದಿಯ ವ್ಯಾಪಾರಸ್ಥರಿಗೆ ಯಾವುದೇ ಜಾಮೀನು ಇಲ್ಲದೇ 10 ಸಾವಿರ ರೂ.ಗಳ ವರೆಗೂ ಸಾಲ ನೀಡಲಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದರು.
ಇಂದು ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಅಡುಗೆ ಸಹಾಯಕರು ಹಾಗೂ ಸಿಬ್ಬಂದಿಗಳಿಗೆ 250ಕ್ಕೂ ಹೆಚ್ಚು ದಿನಸಿ ಆಹಾರ ಪದಾರ್ಥಗಳ ಕಿಟ್‌ಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕೊರೋನಾ ಸೋಂಕು ದೇಶ ಹಾಗೂ ರಾಜ್ಯವ್ಯಾಪಿ ಹರಡಿದ್ದು ಇದೀಗ ರಾಜ್ಯದ ಹಲವು ಜಿಲ್ಲೆಗಳಲ್ಲೂ ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ ಜನರು ಭಯಪಡುವುದು ಬೇಡ ವೈಯಕ್ತಿಕ ಸ್ವಚ್ಛತೆ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮುನ್ನೆಚ್ಚರಿಕೆ ವಹಿಸುವುದು ಒಳಿತು ಎಂದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನ ವ್ಯವಸ್ಥಾಪಕ ದಯಾನಂದ್ ಮಾತನಾಡಿ, ನಮ್ಮ ಸಂಸ್ಥೆಯು ಸಂಕಷ್ಟದ ಸಮಯದಲ್ಲಿ ಸಾಮಾಜಿಕ ಸೇವೆ ಮಾಡಲು ಸದಾ ಮುಂದಿರುತ್ತದೆ. ಕಳೆದ ವಾರ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ ನೀಡಿದೆ. ಮುಂದೆಯು ಸಾಮಾಜಿಕ ಕಳಕಳಿ ಸೇವೆ ಮಾಡುವ ಮೂಲಕ ಜನತೆಗೆ ಸ್ಪಂದಿಸಲಿದೆ ಎಂದರು.
ಮುಖಂಡರಾದ ವರಸಿದ್ಧಿ ವೇಣುಗೋಪಾಲ್, ಎಚ್.ಡಿ. ತಮ್ಮಯ್ಯ, ಪುಷ್ಪರಾಜ್, ಅಡುಗೆ ಸಂಘದ ಅಧ್ಯಕ್ಷ ಆನಂದ್ ಮತ್ತಿತರರು ಉಪಸ್ಥಿತರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail