NEWS

ಜಿಲ್ಲಾಧಿಕಾರಿ ಪ್ರಯತ್ನದಿಂದ ಹೆತ್ತವರ ಮಡಿಲು ಸೇರಿದ ಮಕ್ಕಳು

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಲಾಕ್ ಡೌನ್ ಜಾರಿಯಿಂದಾಗಿ ದೂರದ ರಾಜಸ್ಥಾನದಲ್ಲಿದ್ದ ತಮ್ಮ ಪಾಲಕರನ್ನು ಸೇರಲಾಗದೇ ಆತಂಕಕ್ಕೀಡಾಗಿದ್ದ  10 ವರ್ಷದ ರೋಮುಕುಮಾರಿ,08 ವರ್ಷದ ಪೋಸುಕುಮಾರಿ  ಇಬ್ಬರು ಬಾಲಕಿಯರು ಶುಕ್ರವಾರ ( ಮೇ8)  ರಾತ್ರಿ, ರಾಜಸ್ಥಾನದ ಸಿರೋಹಿ ಜಿಲ್ಲೆಯ ಮೆಮಂಡ್ವಾರ ಗ್ರಾಮದಲ್ಲಿರುವ ಹೆತ್ತ ತಂದೆ ತಾಯಿಗಳ ಮಡಿಲು ಸೇರಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಕಳೆದ ಐವತ್ತು ದಿನಗಳಿಂದ ಹೆತ್ತವರಿಂದ ಅಗಲಿದ್ದ ಈ ಮಕ್ಕಳನ್ನು ಅವರ ಪಾಲಕರೊಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ ಶಹರ ತಹಸೀಲ್ದಾರ್‌ ಶಶಿಧರ ಮಾಡ್ಯಾಳ ಸೇರಿದಂತೆ ಹಲವರು ವಿಶೇಷ ಪ್ರಯತ್ನ ಮಾಡಿದ್ದರು.

ಮೇ 7ರಂದು ಜಿಲ್ಲಾಧಿಕಾರಿ ಶುಭ ಹಾರೈಸಿ ಮಕ್ಕಳನ್ನು ಬೀಳ್ಕೊಟ್ಟಿದ್ದರು. ರಮೇಶ್ ರಾವಲ್ ತಮ್ಮ ಸ್ವಂತ ಕಾರನ್ನು ಸ್ವತಃ ಚಾಲನೆ ಮಾಡಿಕೊಂಡು ದೂರದ ರಾಜಸ್ಥಾನವರೆಗೆ  ಹೋಗಿ ಮಕ್ಕಳನ್ನು ಕರೆತಂದು ಪಾಲಕರಿಗೆ ಒಪ್ಪಿಸಿದ್ದಾರೆ. ಮಕ್ಕಳು ತಲುಪಿರುವ ಕುರಿತು ರಾಜಸ್ಥಾನದ ಸಿರೋಹಿ ಜಿಲ್ಲಾಧಿಕಾರಿ ಭಗವತಿ ಪ್ರಸಾದ್‌ ಅವರು ಧಾರವಾಡ ಜಿಲ್ಲಾಧಿಕಾರಿಗೆ ಪತ್ರವನ್ನೂ ಸಹ ಬರೆದಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...