Breaking NewsNEWSಸಿನಿಪಥ

ಅಪಘಾತಕ್ಕೀಡಾದ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಗೋವಿಂದೇಗೌಡ: ಪ್ರಾಣಾಪಾಯದಿಂದ ಪಾರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ನಟ ಗೋವಿಂದೇಗೌಡ ಅಪಘಾತಕ್ಕೀಡಾಗಿದ್ದಾರೆ. ನಿನ್ನೆ ಸಂಜೆ ಚಿತ್ರೀಕರಣದ ವೇಳೆ ಅಪಘಾತ ಸಂಭವಿಸಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇಗೌಡ ಅವರು, ಯೋಗರಾಜ್ ಭಟ್ ಅವರ ಸಿನಿಮಾದ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಟ ಗೋವಿಂದೇಗೌಡ ಅವರಿಗೆ ಅಪಘಾತ ಉಂಟಾಗಿತ್ತು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಮೂಲಗಳ ಪ್ರಕಾರ ನಟ ಗೋವಿಂದೇಗೌಡ ಅವರಿಗೆ ಚಿತ್ರೀಕರಣದ ಸಂದರ್ಭದಲ್ಲಿ ಕಾರಿನ ಸಾಹಸ ದೃಶ್ಯದ ಶೂಟಿಂಗ್ ವೇಳೆಯಲ್ಲಿ ಹೊಟ್ಟೆಗೆ ಪೆಟ್ಟು ಬಿದ್ದಿರೋದಾಗಿ ತಿಳಿದು ಬಂದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ ಕಾರಣದಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ನವರಸ ನಾಯಕ ಜಗ್ಗೇಶ್, ಕಾಮಿಡಿಕಿಲಾಡಿ ನಟ ಜಿಜಿ ಗೋವಿಂದೇಗೌಡನಿಗೆ ಚಿತ್ರೀಕರಣ ಸಮಯದಲ್ಲಿ ಅಪಘಾತವಾಗಿ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ದಯಮಾಡಿ ಅವನಿಗೆ ಏನು ಆಗದಂತೆ ನೀವು ಪ್ರಾರ್ಥನೆ ಮಾಡಿ. ನಾನು ಗಣಪತಿಗೆ ಪ್ರಾರ್ಥಿಸಿ ಆಸ್ಪತ್ರೆಗೆ ಹೊರಟೆ ಎಂದು ತಿಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ನಿರ್ದೇಶಕ ಯೋಗರಾಜ್ ಭಟ್, ಒಂದು ಚಿಕ್ಕ ಅಪಘಾತವಾಗಿದೆ. ಗೋವಿಂದೇಗೌಡ ಅರಾಮಾಗಿದ್ದಾರೆ. ಚಿಕಿತ್ಸೆ ಬಳಿಕ ಮತ್ತೆ ಅವರು ಚಿತ್ರೀಕರಣಕ್ಕೆ ಮರಳಿದ್ದಾರೆ. ಈಗಷ್ಟೇ ನಾವೆಲ್ಲರೂ ಚಿತ್ರೀಕರಣ ಮುಗಿಸಿ ವಾಪಾಸ್ ಬಂದಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ.

ಈ ಸಂಬಂಧ ನಟ ಜಗ್ಗೇಶ್ ಕೂಡ ಟ್ವೀಟ್ ಮಾಡಿದ್ದು, ಈಗ ತಾನೆ ಗೋವಿಂದೇಗೌಡನನ್ನ ಭೇಟಿ ಮಾಡಿದೆ. ರಾಯರ ಆಶೀರ್ವಾದದಿಂದ ಕ್ಷೇಮವಾಗಿದ್ದಾನೆ. ನಾನು, ಭಟ್ರು ಮತ್ತು ಶರಣ ಜೊತೆಗಿದ್ದೇವೆ. ನಿಮ್ಮ ಹಾರೈಕೆಯಿರಲಿ ಎಂದು ಟ್ವೀಟ್ ಮಾಡಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...