CrimeNEWSಸಿನಿಪಥ

ಬಹುಭಾಷಾ ನಟಿ ಚಿತ್ರಾ ಹೃದಯಾಘಾತದಿಂದ ನಿಧನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ದಕ್ಷಿಣ ಭಾರತದ ಜನಪ್ರಿಯ ನಟಿ ಚಿತ್ರಾ (56) ಅವರು ಹೃದಯಾಘಾತದಿಂದ ಶನಿವಾರ ಮುಂಜಾನೆ ನಿಧನರಾಗಿದ್ದಾರೆ.

ಮೂಲತಃ ಕೇರಳದವರಾಗಿದ್ದ ಅವರು ದಕ್ಷಿಣ ಭಾರತದ ಎಲ್ಲ ಭಾಷೆಯ ಸಿನಿಮಾಗಳಲ್ಲೂ ನಟಿಸಿದ್ದರು. ಆದರೆ, ಮಲಯಾಳಂ ಚಿತ್ರರಂಗದಲ್ಲಿ ಹೆಚ್ಚು ಖ್ಯಾತಿ ಪಡೆದಿದ್ದಾರೆ.

ಇನ್ನು ಹಿಂದಿ ಚಿತ್ರಗಳಲ್ಲೂ ಅವರು ಅಭಿನಯಿಸಿದ್ದರು. ಕನ್ನಡದ ‘ಸುಂದರ ಸ್ವಪ್ನಗಳು’, ‘ಕೃಷ್ಣ ಮೆಚ್ಚಿದ ರಾಧೆ’, ‘ಅಜಯ್​ ವಿಜಯ್​’ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು. ಜತೆಗೆ ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಚಿತ್ರಾ ಅವರು ಜನರ ಮನಗೆದ್ದಿದ್ದರು.

100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಬಹುಭಾಷಾ ಕಲಾವಿದೆ ಚಿತ್ರಾ ಅವರು. ಸದ್ಯ ಚೆನ್ನೈನ ಸಾಲಿಗ್ರಾಮಂನಲ್ಲಿ ಅವರು ನೆಲೆಸಿದ್ದರು. ಶನಿವಾರ ಸಂಜೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಚಿತ್ರಾ ಅವರು ಪತಿ ವಿಜಯರಾಘವನ್ ಪುತ್ರಿ ಮಹಾಲಕ್ಷ್ಮಿ ಅವರನ್ನು ಅಗಲಿದ್ದಾರೆ. ಅಭಿಮಾನಿಗಳು ಮತ್ತು ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿಯುತ್ತಿದ್ದಾರೆ. ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಚಿತ್ರಾ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...