NEWSಸಿನಿಪಥ

ಸಾವಿನಲ್ಲೂ ಸಾರ್ಥಕತೆ ಮೆರೆದ ಅಪ್ಪು- ಎರಡು ಕಣ್ಣುಗಳಿಂದ ನಾಲ್ವರಿಗೆ ದೃಷ್ಟಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾವಿನಲ್ಲೂ ಸಾರ್ಥಕತೆಯನ್ನು ನಟ ಪುನೀತ್ ರಾಜ್ ಕುಮಾರ್ ಮೆರೆದಿದ್ದಾರೆ. ಅವರಿಂದಾಗಿ ನಾಲ್ವರು ಜಗತ್ತನ್ನು ಇಂದು ನೋಡುವಂತಾಗಿದೆ. ಪುನೀತ್ ರಾಜ್ ಕುಮಾರ್ ಅವರ ಎರಡು ಕಣ್ಣುಗಳಿಂದ ನಾಲ್ವರು ಅಂಧಹೀನರಿಗೆ ಅತ್ಯಾಧುನಿಕ ಹೊಸ ತಂತ್ರಜ್ಞಾನ ಮೂಲಕ ದೃಷ್ಟಿ ನೀಡಲಾಗಿದೆ.

ಎರಡು ಕಣ್ಣುಗಳನ್ನು ಭಾಗಗಳನ್ನಾಗಿ ಮಾಡಿ ನಾಲ್ವರಿಗೆ ದೃಷ್ಟಿಯನ್ನು ನೀಡಲಾಗಿದೆ ಎಂದು ನಾರಾಯಣ ನೇತ್ರಾಯಲಯ ಡಾ ಭುಜಂಗ ಶೆಟ್ಟಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಸಾಮಾನ್ಯವಾಗಿ ನೇತ್ರದಾನ ಮಾಡಿದವರ ಕಣ್ಣುಗಳನ್ನು ಇಬ್ಬರಿಗೆ ನೀಡುತ್ತೇವೆ. ಆದರೆ ಅಪ್ಪು ಅವರ ಕಣ್ಣುಗಳನ್ನು ವಿಭಿನ್ನವಾಗಿ ಶಸ್ತ್ರಚಿಕಿತ್ಸೆ ಮಾಡಿ ನಾಲ್ವರಿಗೆ ನೀಡಿದ್ದೇವೆ. ಇದು ನಾವು ಮಾಡಿರುವ ಮೊದಲ ಪ್ರಯತ್ನ, ಅತ್ಯಾಧುನಿಕ ಶಸ್ತ್ರಚಿಕಿತ್ಸೆ ಮೂಲಕ ಈ ರೀತಿ ಮಾಡಲಾಗಿದೆ.

ನಮಗೆ ನಮ್ಮ ಪ್ರಯತ್ನದಲ್ಲಿ ಯಶಸ್ಸು ಸಿಕ್ಕಿದ್ದು ಬಹಳ ಖುಷಿಯಾಗುತ್ತಿದೆ. ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ಬಹಳ ಆರೋಗ್ಯವಾಗಿದ್ದರಿಂದ ಇದು ಸಾಧ್ಯವಾಯಿತು, ಅವರ ಕಣ್ಣುಗಳನ್ನು ಪಡೆದವರು ಚೆನ್ನಾಗಿದ್ದಾರೆ, ಒಬ್ಬ ಮಹಿಳೆ ಮತ್ತು ಮೂವರು ಪುರುಷರಿಗೆ ಕಣ್ಣುಗಳನ್ನು ದಾನಮಾಡಿದ್ದು ಎಲ್ಲರೂ ವಯಸ್ಕರಾಗಿದ್ದಾರೆ ಎಂದರು.

ಮೊನ್ನೆ ಶನಿವಾರ ಒಂದು ದಿನವಿಡೀ ಈ ಶಸ್ತ್ರಚಿಕಿತ್ಸೆಗೆ ಸಮಯ ಹಿಡಿಯಿತು, ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದ ವೈದ್ಯರ ತಂಡಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...