NEWSಸಿನಿಪಥ

ಕೆಜಿಎಫ್ -2 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವುದಿಲ್ಲವೇ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ -2 ತೆರೆಗೆ ಬರಲು ಸಿದ್ಧವಾಗುತ್ತಿದೆ. ಯಶ್ ಅಭಿಮಾನಿಗಳು ತಮ್ಮ ಹೀರೋನನ್ನು ಬೃಹತ್ ಪರದೆ ಮೇಲೆ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಹೌದು! ಭಾರತದಾದ್ಯಂತ ಭರವಸೆ ಮೂಡಿಸಿರುವ, ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿರುವ ಕನ್ನಡದ ಕೆಜಿಎಫ್- 2 ಚಿತ್ರದ ಕುರಿತು ಮತ್ತೊಂದು ಮಹತ್ವದ ಸುದ್ದಿ ನೀಡಿದೆ ಚಿತ್ರತಂಡ.

ವರಮಹಾಲಕ್ಷ್ಮೀ ಹಬ್ಬದ ದಿನದಂದು ಶುಭ ಸುದ್ದಿ ನೀಡಿರುವ ಕೆಜಿಎಫ್ -2 ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ ಚಿತ್ರದ ಸ್ಯಾಟಲೈಟ್ ಪ್ರಸಾರದ ಜೊತೆಗಾರರನ್ನು ಘೋಷಿಸಿದೆ.

ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ಕೆಜಿಎಫ್ -2 ಬಿಡುಗಡೆಯಾಗಲಿದ್ದು, ಅವುಗಳ ಸ್ಯಾಟಲೈಟ್ ಪ್ರಸಾರದ ಹಕ್ಕನ್ನು ‘ಜೀ’ ಪಡೆದುಕೊಂಡಿದೆ. ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಕೆಜಿಎಫ್ -2 ಬಿಡುಗಡೆಯಾಗಲಿದ್ದು, ಇವುಗಳಿಗೆ ಆಯಾ ಭಾಷೆಯ ಜೀ ಚಾನಲ್​ಗಳು ಪ್ರಸಾರದ ಹಕ್ಕನ್ನು ಪಡೆದುಕೊಂಡಿವೆ. ಈ ಕುರಿತು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿ ಮಾಹಿತಿಯನ್ನು ನೀಡಿದೆ.

ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ‘ಕೆಜಿಎಫ್ 2’ ಚಿತ್ರದ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಇನ್ನೂ ಘೋಷಿಸಿಲ್ಲ. ಆದರೆ ಹೊಂಬಾಳೆ ಫಿಲ್ಮ್ಸ್ ಸತತವಾಗಿ ಚಿತ್ರದ ಕುರಿತು ಅಪ್ಡೇಟ್ ನೀಡುತ್ತಿದ್ದು, ಚಿತ್ರತಂಡ ಬಿಡುಗಡೆಯ ಕುರಿತು ಪ್ರಯತ್ನ ಮುಂದುವರಿಸಿರುವುದಂತೂ ನಿಜ.

ಚಿತ್ರದ ಸ್ಯಾಟಲೈಟ್ ಹಕ್ಕು ಬಿಡುಗಡೆಯ ಘೋಷಣೆಯಾದ ತಕ್ಷಣ ಅಭಿಮಾನಿಗಳಿಗೆ ಗೊಂದಲವಾಗಿದ್ದು, ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಲಿದೆಯೇ ಎಂಬ ಪ್ರಶ್ನೆ ಎತ್ತಿದ್ದಾರೆ. ಆದರೆ ವಾಸ್ತವವಾಗಿ ಸ್ಯಾಟಲೈಟ್ ಹಕ್ಕು ಎನ್ನುವುದು ಚಿತ್ರವನ್ನು ಟಿವಿಯಲ್ಲಿ ಪ್ರಸಾರ ಮಾಡಲು ಪಡೆದುಕೊಳ್ಳುವ ಹಕ್ಕು. ಆ ಹಕ್ಕನ್ನು ಜೀ ಪಡೆದುಕೊಂಡಿದೆ.

ಚಿತ್ರದ ಒಟಿಟಿ ಹಕ್ಕನ್ನು ನಿರ್ಮಾಣ ಸಂಸ್ಥೆ ಇನ್ನೂ ಯಾರಿಗೂ ನೀಡಿಲ್ಲ ಮತ್ತು ಈ ಕುರಿತು ಯಾವುದೇ ಘೋಷಣೆಯನ್ನೂ ಹೊರಡಿಸಿಲ್ಲ. ಬಲ್ಲ ಮೂಲಗಳ ಪ್ರಕಾರ ಎಲ್ಲವೂ ಅಂದುಕೊಂಡಂತೆ ನಡೆದರೆ ‘ಕೆಜಿಎಫ್ -2 ’ ಚಿತ್ರಮಂದಿರಗಳಲ್ಲಿಯೇ ಬಿಡುಗಡೆಯಾಗಲಿದೆ.

ತಾರಾಗಣದಲ್ಲಿ: ಕೆಜಿಎಫ್ -2 ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದು, ಯಶ್, ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ಪ್ರಕಾಶ್ ರಾಜ್, ರವೀನಾ ಟಂಡನ್ ಮೊದಲಾದವರು ಅಭಿನಯಿಸಿದ್ದಾರೆ. ಪ್ಯಾನ್ ಇಂಡಿಯಾ ಮಾದರಿಯ ಈ ಚಿತ್ರಕ್ಕೆ ಈಗಾಗಲೇ ದೇಶದಾದ್ಯಂತ ಅಭಿಮಾನಿಗಳು ಕಾಯುತ್ತಿದ್ದಾರೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ