NEWSಸಿನಿಪಥ

ಮೈಸೂರು- ಪುನೀತ್ ರಾಜ್‍ಕುಮಾರ್‌ ನುಡಿನಮನ: ಸಂಘಟನೆಗಳಿಗೆ ಸಚಿವ ಸೋಮಶೇಖರ್ ಪತ್ರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಟನಾ ರಂಗದಲ್ಲಿ ಚಿಕ್ಕವಯಸ್ಸಿನಲ್ಲೇ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದ ಯುವ ಹಾಗೂ ಖ್ಯಾತ ನಟರಾಗಿದ್ದ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನ ಕರುನಾಡು ಮಾತ್ರವಲ್ಲದೇ, ಇಡೀ ದೇಶವನ್ನೇ ದಿಗ್ಭ್ರಮೆಗೊಳಿಸಿದೆ ಎಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಅಸಂಖ್ಯಾತ ಅಭಿಮಾನಿಗಳಿಗೆ ನೋವುಂಟು ಮಾಡಿದೆ. ಪುನೀತ್ ಅವರು ಕೇವಲ ನಟನೆಯಿಂದ ಮಾತ್ರ ಗುರುತಿಸಿಕೊಂಡವರಲ್ಲ, ಅವರೊಬ್ಬ ಸಮಾಜದ ಬದ್ಧತೆಯುಳ್ಳ ನಾಗರಿಕರಾಗಿದ್ದರು.

ಅನೇಕ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಎಲ್ಲಕ್ಕಿಂತ ಹೆಚ್ಚಾಗಿ ಒಬ್ಬ ಶುದ್ಧ ಮನಸ್ಸಿನ ವ್ಯಕ್ತಿತ್ವವುಳ್ಳವರಾಗಿದ್ದರು. ಇಂಥ ಒಬ್ಬರನ್ನು ಕಳೆದುಕೊಂಡಿರುವುದು ನನಗೆ ವೈಯಕ್ತಿಕವಾಗಿಯೂ ಸಹ ನಷ್ಟ ಎಂದೇ ಹೇಳಬಯಸುತ್ತೇನೆ ಎಂದರು.

ಅವರ ಜನಪ್ರಿಯತೆ ಎಷ್ಟರ ಮಟ್ಟಿಗಿತ್ತು ಎಂಬುದು ಅವರ ಅಂತಿಮ ದರ್ಶನದ ವೇಳೆ ಮತ್ತೊಮ್ಮೆ ಸಾಬೀತಾಗಿದೆ. 22 ಲಕ್ಷಕ್ಕೂ ಹೆಚ್ಚು ಮಂದಿ ಅವರಿಗೆ ಅಂತಿಮ ನಮನ ಸಲ್ಲಿಸಿದ್ದೇ ಸಾಕ್ಷಿ. ಇನ್ನೂ ಸಹ ಅವರ ಸಮಾಧಿಗೆ ನಿರಂತರವಾಗಿ ಸಾವಿರಾರು ಜನರು ಬರುತ್ತಿರುವುದನ್ನು ನೋಡುತ್ತೇವೆ. ಇಂತಹ ಒಬ್ಬ ವ್ಯಕ್ತಿಗೆ ಗೌರವ ಸೂಚಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.

ತಂದೆಯವರಾದ ಡಾ. ರಾಜಕುಮಾರ್ ಅವರ ಮಾರ್ಗದಲ್ಲೇ ನಡೆಯುತ್ತಿದ್ದ ಪುನೀತ್ ಅವರು ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಸಮಾಜದ ಬಡ ವರ್ಗ ರೈತರ ಮೇಲೆ ಅಪಾರ ಕಾಳಜಿ ಹೊಂದಿದ್ದ ಅವರು, ಕೆಎಂಎಫ್ ಗೆ ಉಚಿತವಾಗಿ ರಾಯಭಾರಿಯಾಗಿ ಜವಾಬ್ದಾರಿಯನ್ನು ನಿರ್ವಹಿಸಿದರು.

ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ಕನಸು ಕಂಡಿದ್ದ ಪುನೀತ್ ಅವರು ಅದಕ್ಕೂ ರಾಯಭಾರಿಯಾಗಿದ್ದರು. ಇನ್ನು ಮೈಸೂರು ಜಿಲ್ಲೆಯಲ್ಲೂ ಸಹ ಅವರ ನಂಟು ಬಹಳಷ್ಟಿದೆ ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಶಕ್ತಿಧಾಮ ಸ್ಥಾಪನೆ ಮಾಡಿರುವ ವರನಟ ಡಾ. ರಾಜಕುಮಾರ್ ಅವರ ಆಶಯವನ್ನು ಎತ್ತಿ ಹಿಡಿಯಲು ಸಾಕಷ್ಟು ಶ್ರಮಿಸಿದ್ದಾರೆ. ಮಕ್ಕಳೊಂದಿಗೆ ಮಕ್ಕಳಾಗುತ್ತಿದ್ದ ಅವರು, ಸಾವಿರಾರು ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ಒದಗಿಸಿದ್ದಾರೆ. ಇಂತಹ ಸರಳ, ವಿನಯ ವ್ಯಕ್ತಿಯನ್ನು ಕನ್ನಡಿಗರಾದ ನಾವು ಎಂದೆಂದೂ ಸ್ಮರಿಸಬೇಕು.

ಪುನೀತ್ ರಾಜ್ ಕುಮಾರ್ ಅವರಿಗೆ ನಾವೀಗ ಮೈಸೂರಿನಲ್ಲಿ ʼನುಡಿನಮನʼ ಕಾರ್ಯಕ್ರಮವನ್ನು ಆಯೋಜಿಸಬೇಕಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಿಮ್ಮ ಸಂಘಟನೆಗಳಾದ ವರನಟ ಡಾ. ರಾಜಕುಮಾರ್ ಅಭಿಮಾನಿಗಳ ಸಂಘ, ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅಭಿಮಾನಿಗಳ ಸಂಘ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘಗಳ ಸಹಕಾರದೊಂದಿಗೆ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸೋಣ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯೋಣ. ಜೊತೆಗೆ ಕನ್ನಡ ಸಂಘಟನೆಗಳ ಸಹಕಾರವನ್ನು ಪಡೆಯೋಣ ಎಂದು ತಿಳಿಸಿದ್ದಾರೆ.

ನುಡಿನಮನ ಕಾರ್ಯಕ್ರಮಕ್ಕೆ ಕನ್ನಡ ಸಂಘಟನೆಯವರು, ಮಹಿಳೆಯರ ಸಬಲೀಕರಣಕ್ಕೆ ರಾಜಕುಮಾರ್ ಕುಟುಂಬದವರು ತೆರೆದಿರುವ “ಶಕ್ತಿಧಾಮ”ದ ಸದಸ್ಯರು, ಸಿಬ್ಬಂದಿ, ಆಡಳಿತ ವರ್ಗದವರು ಸೇರಿದಂತೆ ಕಲಾವಿದರು, ಅಪಾರ ಅಭಿಮಾನಿಗಳು ಆಗಮಿಸುವುದರಿಂದ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳುವುದರ ಜೊತೆಗೆ ಈ ಕಾರ್ಯಕ್ರಮದ ಮೂಲಕ ಪುನೀತ್ ಅವರ ಸಾಮಾಜಿಕ ಕಳಕಳಿಯನ್ನು ಜನತೆಗೆ ತಿಳಿಸುವ ಕಾರ್ಯವನ್ನು ಮಾಡೋಣ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ