NEWSಸಿನಿಪಥ

ನಟ ಪುನೀತ್ ರಾಜ್ ಕುಮಾರ್‌ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ : ಡಾ. ಶಿವಮೂರ್ತಿ ಮುರುಘಾ ಶರಣರು

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಅಕಾಲಿಕ ಮರಣಕ್ಕೆ ತುತ್ತಾದ ಖ್ಯಾತ ನಟ ಪುನೀತ್ ರಾಜ್ ಕುಮಾರ್‌ ಅವರಿಗೆ 2021ನೇ ಸಾಲಿನ ಮರಣೋತ್ತರ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ.

ಡಾ. ಶಿವಮೂರ್ತಿ ಮುರುಘಾ ಶರಣರು ಗುರುವಾರ ಸುದ್ದಿಗೋಷ್ಠಿ ನಡೆಸಿ ನಟ ಪುನೀತ್ ರಾಜ್ ಕುಮಾರ್ ಅವರಿಗೆ 2021ನೇ ಸಾಲಿನ ಮರಣೋತ್ತರ ಬಸವಶ್ರೀ ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿದರು.

ಬಾಲನಟ, ನಾಯಕ ನಟ, ಹಿನ್ನೆಲೆ ಗಾಯಕ ಹಾಗೂ ನಿರ್ಮಾಪಕರಾಗಿ ಪುನೀತ್ ರಾಜ್‌ ಕುಮಾರ್ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

ಸಾಮಾಜಿಕ ಜಾಗೃತಿಯ ಪ್ರಚಾರಕರಾಗಿ ಯೂಸಮಾಜ ಸೇವೆ ಸಲ್ಲಿ ಸಿದ್ದಾರೆ. ಮಾನವೀಯಮೌಲ್ಯಗಳನ್ನು ಹೊಂದಿದ್ದ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ’ ಎಂದು ಮುರುಘಾ ಮಠದ ಶಿವಮೂರ್ತಿಮುರುಘಾ ಶರಣರು ತಿಳಿಸಿದರು.

ಮುರುಘಾ ಮಠದ ಅನುಭವ ಮಂಟಪದಲ್ಲಿ 2022ರಲ್ಲಿ ನಡೆಯುವ ಬಸವ ಜಯಂತಿ ಆಚರಣೆ ಕಾರ್ಯಕ್ರಮದ ವೇದಿಕೆಯಲ್ಲಿ ಪುನೀತ್ ಅವರ ಪತ್ನಿ ಅಶ್ವಿನಿ ಅವರಿಗೆ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಪ್ರ ಶಸ್ತಿಯು 5 ಲಕ್ಷ ರೂ. ನಗದು ಹಾಗೂ ಫಲಕವನ್ನು ಒಳಗೊಂಡಿದೆ.

ನ.10ರಂದು ಬೆಂಗಳೂರಿನ ಅವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಬರಲಾಗುವುದು. ಪ್ರಶಸ್ತಿ ನೀಡುವ ಕುರಿತು ಈಗಾಗಲೇ ಶಿವರಾಜ್ ಕುಮಾರ್ ಅವರ ಜತೆ ಚರ್ಚಿಸಲಾಗಿದೆ ಎಂದು ಶ್ರೀ ಗಳು ಹೇಳಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...