ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಸ್ಯಾಂಡಲ್ವುಡ್ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಪುನೀತ್ ರಾಜ್ಕುಮಾರ್ ಆರೋಗ್ಯವನ್ನು ಸಮಸ್ಥಿತಿಗೆ ತರೋಕೆ ವೈದ್ಯರು ಪ್ರಯತ್ನಿಸುತ್ತಿದ್ದಾರೆ. ಈ ಮಧ್ಯೆ ಆಸ್ಪತ್ರೆಗೆ ಸೆಲೆಬ್ರಿಟಿಗಳ ದಂಡೇ ನೆರೆದಿದೆ.
ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದಾರೆ. ಈ ವೇಳೆ ರಮಣಶ್ರೀ ಆಸ್ಪತ್ರೆಯಲ್ಲಿ ಮೊದಲು ಪ್ರಥಮ ಚಿಕ್ಸಿ ಕೊಡಿಸಲಾಗಿದೆ. ನಂತರ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.
ಈಗಾಗಲೇ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸಿದ್ದಾರೆ. ಹೃದ್ರೋರೋಗ ತಜ್ಞರು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಪುನೀತ್ ಆರೋಗ್ಯದ ಬಗ್ಗೆ ಹಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ಹೆಚ್ಚುವರಿ ಪೋಲಿಸ್ ಆಯುಕ್ತ ಮುರುಗನ್ ಆಗಮನ: ವಿಷಯ ತಿಳಿಯುತ್ತಿದ್ದಂತೆ ಹೆಚ್ಚುವರಿ ಪೋಲಿಸ್ ಆಯುಕ್ತ ಮುರುಗನ್ ವಿಕ್ರಮ್ ಆಸ್ಪತ್ರೆಗೆ ಆಗಮಿಸಿದ್ಧಾರೆ. ಈಗಾಗಲೇ ವಿಕ್ರಮ್ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಮಿಲ್ಲರ್ಸ್ ರೋಡ್ ಸಂಚಾರ ಬಂದ್ ಮಾಡಿದ ಪೊಲೀಸರು, ಬ್ಯಾರಿಕೇಡ್ ಹಾಕಿ ಭದ್ರತಾ ಕ್ರಮ ಕೈಗೊಂಡಿದ್ದಾರೆ.