CrimeNEWSಸಿನಿಪಥ

ಮೆಗಾ ಹಿಟ್ ಸಿನಿಮಾ ‘ಆಟೋ ರಾಜ’ ನಿರ್ಮಾಪಕ ಸಿ. ಜಯರಾಮ್ ಇನ್ನಿಲ್ಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಸಿ. ಜಯರಾಮ್ ನಿಧನರಾಗಿದ್ದಾರೆ. ಸೆ.9 ರ ಬೆಳಗಿನಜಾವ 2 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ.

ಇದೀಗ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಹಲವಾರು ಗಣ್ಯಾತಿ ಗಣ್ಯರು,ನಿರ್ಮಾಪಕರು ಕಂಬನಿ ಮಿಡಿದಿದ್ದಾರೆ. 70-80ರ ದಶಕದಲ್ಲಿ ಕನ್ನಡದಲ್ಲಿ ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಅವರು ನಂತರ ಸಿನಿಮಾ ನಿರ್ಮಾಣದಿಂದ ದೂರ ಉಳಿದಿದ್ದರು.

1976ರಲ್ಲಿ ತೆರೆಕಂಡ ಶ್ರೀನಾಥ್‌ ಮತ್ತು ಆರತಿ ಅಭಿನಯದ ‘ಪಾವನ ಗಂಗ’, ರಜನಿಕಾಂತ್ ಮತ್ತು ವಿಷ್ಣುವರ್ಧನ್ ಒಟ್ಟಿಗೆ ನಟಿಸಿದ್ದ ‘ಗಲಾಟೆ ಸಂಸಾರ’ ಆನಂತ್ ನಾಗ್ ನಟಿಸಿದ್ದ ಸೂಪರ್ ಹಿಟ್ ಸಿನಿಮಾ ‘ನಾ ನಿನ್ನ ಬಿಡಲಾರೆ’, ಶಂಕರ್ ನಾಗ್ ಅವರ ಮೆಗಾ ಹಿಟ್ ಸಿನಿಮಾ ‘ಆಟೋ ರಾಜ’ ಮುಂತಾದ ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿ ಹೆಸರು ಮಾಡಿದ್ದರು.

ಹೀಗೆ ಹಲವಾರು ಹಿಟ್ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ  ಜಯರಾಮ್ ಇನ್ನು ನೆನಪು ಮಾತ್ರ.  ಜಯರಾಮ್‌ ಅವರು ಪಾರ್ವತಮ್ಮ ರಾಜ್‌ ಕುಮಾರ್‌ ಅವರ ಸಹೋದರಿಯನ್ನು ವಿವಾಹವಾಗಿದ್ದರು.

ಜಯರಾಮ್ ಅವರ ಪುತ್ರ ಮಿಲನ ಪ್ರಕಾಶ್ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡು ದೊಡ್ಡ ಹೆಸರು ಮಾಡಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ಅವರ ಮಿಲನ, ವಂಶಿ, ವಿನಯ್ ರಾಜ್ ಕುಮಾರ್ ಅವರ ಸಿದ್ದಾರ್ಥ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ತಾರಕ್, ಯಶ್ ಹಾಗೂ ವಿಜಯ್ ರಾಘವೇಂದ್ರರವರು ನಟಿಸಿರುವ ಗೋಕುಲ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

 

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ