NEWSನಮ್ಮರಾಜ್ಯಸಿನಿಪಥ

ಭೂ ತಾಯಿಯ ಮಡಿಲು ಸೇರಿದ ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಇನ್ನು ನೆನಪು ಮಾತ್ರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಬೆಳಗ್ಗೆ 7.30ರ ವೇಳೆಗೆ ಕಂಠೀರವ ಸ್ಟುಡಿಯೋದಲ್ಲಿ ಈಡಿಗ ಸಂಪ್ರದಾಯದಂತೆ ನೆರವೇರಿಸಲಾಯಿತು.

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು. ಮೂರು ಬಾರಿ ಕುಶಾಲು ತೋಪು ಸಿಡಿಸಿ ಅಪ್ಪುಗೆ ಗೌರವ ಸಲ್ಲಿಸಲಾಯಿತು. ರಾಘವೇಂದ್ರ ರಾಜ್‌ಕುಮಾರ್‌ ಅವರ ಪುತ್ರ ವಿನಯ್ ರಾಜ್ ಕುಮಾರ್ ಅವರು ಮೂರು ಸುತ್ತು ಸಮಾಧಿ ಸುತ್ತಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ನಂತರ ರಥದಲ್ಲಿ ಪುನೀತ್ ಪಾರ್ಥಿವ ಶರೀರವನ್ನಿಟ್ಟು ಪೂಜೆ ಸಲ್ಲಿಸಲಾಯಿತು. ಬಳಿಕ ಮೃತದೇಹವನ್ನು ಗುಂಡಿಗೆ ಇಳಿಸಿ ಅಲ್ಲಿಯೂ ವಿಧಿವಿಧಾನಗಳು ನಡೆದ ನಂತರ ಅಪ್ಪುವನ್ನು ಮಣ್ಣಲ್ಲಿ ಲೀನಗೊಳಿಸಲಾಯಿತು.

ಶುಕ್ರವಾರ ಬೆಳಗ್ಗೆ ಮನೆಯಲ್ಲಿ ವರ್ಕೌಟ್ ಮಾಡಿದ ಸಂದರ್ಭದಲ್ಲಿ ಅಪ್ಪುಗೆ ಆಯಾಸ ಕಾಣಿಸಿಕೊಂಡಿತು. ಹಾಗೆಯೇ ಸ್ಟೀಮ್ ಬಾತ್ ಮಾಡಿಕೊಂಡು ಪತ್ನಿ ಜೊತೆ ಸ್ಥಳೀಯ ರಮಣಶ್ರೀ ಆಸ್ಪತ್ರೆಗೆ ತೆರಳಿದ್ದರು.

ಅಲ್ಲಿ ಇಸಿಜಿ ಮಾಡಿಸಿಕೊಂಡು ಇನ್ನೇನು ಹೊರಡುವಷ್ಟರಲ್ಲಿ ಅಲ್ಲಿಯೇ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಕಾರಿನಲ್ಲಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಐಸಿಯುನಲ್ಲಿ ಸತತ ಮೂರು ಗಂಟೆಗಳು ಚಿಕಿತ್ಸೆ ನೀಡಲಾಯಿತ್ತಾದರೂ, ಅದು ಫಲಕಾರಿಯಾಗದೆ ಕೊನೆಯುಸಿರೆಳೆದರು.

ಸಂಜೆಯ ವೇಳೆ ಅಪ್ಪು ಪಾರ್ಥಿವ ಶರೀರವನ್ನು ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ತೆಗೆದುಕೊಂಡು ಬರಲಾಯಿತು. ಅಲ್ಲಿ ಕುಟುಂಬಸ್ಥರಿಂದ ಅಂತಿಮ ನಮನ ಸಲ್ಲಿಸಲಾಯಿತು.

ಬಳಿಕ ಅಲ್ಲಿಂದ ಕಂಠೀರ ಸ್ಟೇಡಿಯಂನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು. ಶುಕ್ರವಾರ ಮಧ್ಯರಾತ್ರಿಯಿಂದ ಇಂದು ಬೆಳಗ್ಗಿನ ಜಾವದವರೆಗೂ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಒಟ್ಟಾರೆ 10 ಲಕ್ಷಕ್ಕೂ ಹೆಚ್ಚು ಮಂದಿ ನೆಚ್ಚಿನ ನಟನಿಗೆ ಅಂತಿಮ ನಮನ ಸಲ್ಲಿಸಿದರು.

ಇಂದು ಮುಂಜಾನೆ 4.28ಕ್ಕೆ ಕಂಠೀರವ ಸ್ಟೇಡಿಯಂಗೆ ಸಿಎಂ ಆಗಮಿಸಿ, 4.34ಕ್ಕೆ ವೇದಿಕೆ ಬಳಿ ತೆರಳಿ ಶಿವಣ್ಣ ಜೊತೆ ಮಾತುಕತೆ ನಡೆಸಿದರು. ನಂತರ ಪುನೀತ್‌ಗೆ ಅಂತಿಮ ನಮನ ಸಲ್ಲಿಸಿ ಹಣೆಗೆ ಮುತ್ತಿಟ್ಟು ಕಣ್ಣೀರು ಸುರಿಸಿದರು.

ಬಳಿಕ 4.43ಕ್ಕೆ ಅಂತಿಮ ಯಾತ್ರೆ ಆರಂಭವಾಯಿತು. ಅಂತಿಮ ಯಾತ್ರೆ ವೇಳೆ ಒಟ್ಟು 10 ಪೊಲೀಸ್ ಬೈಕ್ ಗಳ ಎಸ್ಕಾರ್ಟ್ ನಿಯೋಜನೆ ಮಾಡಲಾಗಿತ್ತು. 5.30ಕ್ಕೆ ಯಶವಂತಪುರದಿಂದ ಮೃತದೇಹ ಪಾಸ್ ಆಗಿದ್ದು, 5.44ಕ್ಕೆ ಸ್ಟುಡಿಯೋಗೆ ತಲುಪಿತು.

5.52ಕ್ಕೆ ತೆರೆದ ವಾಹನದಿಂದ ಪುನೀತ್ ಮೃತದೇಹ ಇಳಿಸಿದ್ದು, 6.10ಕ್ಕೆ ಸಿಎಂ ಆಗಮಿಸಿದರು. 6.17 ಕ್ಕೆ ಸರ್ಕಾರದಿಂದ ಗೌರವ ವಂದನೆ ಸಲ್ಲಿಸಲಾಯಿತು. ಬಳಿಕ ಪುನೀತ್ ಅವರನ್ನು 7.33ರಲ್ಲಿ ಮಣ್ಣಿನಲ್ಲಿ ಲೀನವಾಗಿಸಲಾಯಿತು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...