CrimeNEWSಸಿನಿಪಥ

ಹಿರಿಯ ನಟ, ರಂಗಕರ್ಮಿ ಜಿ.ಕೆ.ಗೋವಿಂದ ರಾವ್ ವಿಧಿವಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಹಿರಿಯ ರಂಗಕರ್ಮಿ ಜಿ.ಕೆ.ಗೋವಿಂದ ರಾವ್ (86) ಇಂದು (ಅ.15) ಬೆಳಗ್ಗೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ.

ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿದ ಅವರು ಇಂಗ್ಲಿಷ್ ಪ್ರಾಧ್ಯಾ ಪಕರಾಗಿ ಸೇವೆ ಸಲ್ಲಿಸಿದ್ದಾರೆ. ರಂಗಭೂಮಿ, ಸಿನಿಮಾರಂಗದ ಒಡನಾಟ ಅವರಿಗಿದೆ.

ಈಶ್ವರ ಅಲ್ಲಾ (ಕಿರು ಕಾದಂಬರಿ), ಶೇಕ್ಸ್ಪಿಯರ್ ಎರಡು ನಾಟಕಗಳ ಅಧ್ಯಯನ, ಶೇಕ್ಸ್ಪಿಯರ್ ಸಂವಾದ (ವಿಮರ್ಶಾ ಲೇಖನಗಳು), ನಡೆ-ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರ ತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕ ರ್: ತಮ್ಮ ಆಯ್ಕೆ ಯಾವುದು? (ಸಂಕೀರ್ಣ ಬರಹಗಳ ಸಂಗ್ರಹಗಳು) ಸೇರಿದಂತೆ ಹಲವಾರು ಕೃತಿಗಳನ್ನು ರಚಿಸಿದ್ದಾರೆ.

ಗೃಹ, ಮಿಥಿಲೆಯ ಸೀತೆಯರು, ಕರ್ಫ್ಯೂ, ಶಾಸ್ತ್ರಿ ಸೇರಿದಂತೆ ಹಲವು ಚಿತ್ರಗಳಲ್ಲಿ ಗೋವಿಂದ ರಾವ್ ನಟಿಸಿದ್ದರು. ಗೋವಿಂದ ರಾವ್ ಅವರು ತಮ್ಮ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...