NEWSಸಿನಿಪಥ

ಸಂಚಾರ ಮುಗಿಸಿದ ವಿಜಯ್‌: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ ನಟ ಸಂಚಾರಿ ವಿಜಯ್ (37) ಅವರ ಅಂತ್ಯಕ್ರಿಯೆ ಸ್ವಗ್ರಾಮ ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ಮಂಗಳವಾರ ಸಂಜೆ ವೇಳೆಗೆ ನಡೆಯಲಿದೆ.

ಅಂಗಾಂಗ ಕಸಿ ಕಾರ್ಯ ಮುಗಿದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರಿಂದ ಅಪೋಲೊ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಇದರಂತೆ ಆಸ್ಪತ್ರೆ ಹಾಗೂ ಪೊಲೀಸರ ಅಂತಿಮ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ವಿಜಯ್‌ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

ಸಂಚಾರಿ ವಿಜಯ್ ಅವರ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 8ರಿಂದ 10ರವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ನಂತರ ಸಂಜೆ ವೇಳೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಟ ವಿಜಯ್ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ