NEWSನಮ್ಮರಾಜ್ಯ

ವಿವಿಧ ವರ್ಗದ ಜನರ ಸಮಸ್ಯೆ ತಾತ್ಕಾಲಿಕ ಪರಿಹಾರಕ್ಕೆ 1610 ಕೋಟಿ ರೂ.  

ಕೋವಿಡ್ -19 ರಿಂದ ನೋವು ಅನುಭವಿಸುತ್ತಿರುವವರಿಗೆ ನೆರವಾಗಲು ಸಿಎಂ ಬಿಎಸ್‌ವೈ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ ಒಂದೂವರೆ ತಿಂಗಳಿನಿಂದ ಲಾಕ್ ಡೌನ್‌ನ ಪರಿಣಾಮವಾಗಿ ವಿವಿಧ ನಿರ್ಬಂಧಗಳನ್ನು ಹೇರಿರುವುದರಿಂದ ಎಲ್ಲ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸುತ್ತಾರೆ.ಈ ಹಿನ್ನೆಲೆಯಲ್ಲಿ ಅವರ ಸಮಸ್ಯೆಯನ್ನು ನೀಗಿಸಲು 1610ಕೋಟಿ ರೂ. ಪ್ಯಾಕೇಜ್‌ಅನ್ನು ಮುಖ್ಯ ಮಂತ್ರಿ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ

https://play.google.com/store/apps/detail

ಲಾಕ್ ಡೌನ್‌ನಿಂದಾಗಿ ಎಲ್ಲ ದೇವಾಲಯಗಳು ಮುಚ್ಚಿರುವುದರಿಂದ ಹಬ್ಬ  ಮದುವೆ, ಸಭೆ-ಸಮಾರಂಭಗಳು ಹಾಗೂ ಮತ್ತಿತರ ಯಾವುದೇ ಕಾರ್ಯಕ್ರಮಗಳು ನಡೆಯದಿರುವುದರಿಂದ ಹೂವುಗಳ ಬೇಡಿಕೆ ಇಲ್ಲದೇ ಹೂವು ಬೆಳೆಗಾರರು ತಾವು ಬೆಳೆದಿರುವ ಎಲ್ಲ ಹೂವುಗಳನ್ನು ತಮ್ಮ ಹೊಲದಲ್ಲೇ  ನಾಶ ಮಾಡುವ ಪರಿಸ್ಥಿತಿ ಉದ್ಭವಿಸಿದೆ. ಒಟ್ಟಾರೆ 11687 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆದಿರುವ ಹೂವುಗಳು ಮಾರಾಟವಾಗದೆ ರೈತರಿಗೆ ನಷ್ಟವಾಗಿದೆ. ಇದರಿಂದ ಎಲ್ಲ ರೀತಿಯ ಹೂವುಗಳು ಬೆಳೆದಿರುವ ರೈತರಿಗೆ ನೆರವಾಗಲು ನಮ್ಮ ಸರ್ಕಾರವು ಹೆಕ್ಟೇರ್‌ಗೆ ಗರಿಷ್ಠ 25,000 ರೂ.ಗಳಂತೆ ಪರಿಹಾರವನ್ನು ಘೋಷಿಸುತ್ತದೆ.

ಈ ವರ್ಷ ರಾಜ್ಯದಲ್ಲಿ ತರಕಾರಿ ಮತ್ತು ಹಣ್ಣುಗಳು ಇಳುವರಿಯು ಉತ್ತಮವಾಗಿದೆ. ಆದರೆ ಕೋವಿಡ್ – 19 ರಿಂದ ಆಗಿರುವ ರಾಷ್ಟ್ರಾದ್ಯಂತ ಲಾಕ್ ಡೌನ್ ನಿಂದಾಗಿ ರೈತರು ತಮ್ಮ ಬೆಳೆಗಳಿಗೆ ಸೂಕ್ತ ದರಗಳನ್ನು ಪಡೆಯಲು ಸಾಧ್ಯವಾಗಿಲ್ಲ. ನಷ್ಟಕ್ಕೆ ಒಳಗಾಗಿರುವ ತರಕಾರಿ ಹಾಗೂ ಹಣ್ಣು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆ ಪ್ಯಾಕೇಜ್ ಅನ್ನು ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

ಕೋವಿಡ್ 19ರಿಂದಾಗಿ ರೈತರಷ್ಟೇ ಅಲ್ಲದೆ ಪಟ್ಟಣದ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಗಸರ ಹಾಗೂ ಕ್ಷೌರಿಕರ ವೃತ್ತಿಯಲ್ಲಿ ತೊಡಗಿರುವವರು ಒಂದೂವರೆ ತಿಂಗಳಿಗೆ ಮೇಲ್ಪಟ್ಟು ತಮ್ಮ ಕಸುಬನ್ನು ನಡೆಸಲಾಗಿದೇ ತಮ್ಮ ದೈನಂದಿನ ಆದಾಯವನ್ನು ಕಳೆದುಕೊಂಡಿದ್ದಾರೆ. ಇವರಿಗೆ ನೆರವಾಗಲು ನಮ್ಮ ರಾಜ್ಯದಲ್ಲಿರುವ ಅಂದಾಜು 60,000 ಅಗಸರ ವೃತ್ತಿಯಲ್ಲಿ ಇರುವ ಹಾಗೂ 2,30,000 ಕ್ಷೌರಿಕ ವೃತ್ತಿಯಲ್ಲಿ ಇರುವವರಿಗೆ 5000  ರೂ.ಗಳನ್ನು ಒಂದು ಬಾರಿ ಪರಿಹಾರವಾಗಿ ನೀಡಲಾಗುವುದು ಎಂದು ವಿವರಿಸಿದರು.

ಹಾಗೆಯೇ ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗಿದೇ ತಮ್ಮ ಆದಾಯವನ್ನು ಕಳೆದುಕೊಂಡಿರುತ್ತಾರೆ. ನಮ್ಮ ರಾಜ್ಯದಲ್ಲಿ ಇರುವ ಇಂತಹ 7,75,000 ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ 5000 ರೂ. ಗಳನ್ನು ನೀಡಲಾಗಿದೆ.

ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳನ್ನು ನಡೆಸುವ ಉದ್ದಿಮೆದಾರರು ತಮ್ಮ ಉದ್ದಿಮೆಗಳನ್ನು ತೆರೆಯಲಾಗದೆ ಹಾಗೂ ತಮ್ಮ ಉತ್ಪನ್ನಗಳನ್ನು ಸಾಗಿಸಿ ಮಾರಾಟ ಮಾಡಲಾಗದೆ ನಷ್ಟವನ್ನು ಅನುಭವಿಸಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ವಹಿವಾಟು ಚೇತರಿಕೆಯಾಗಲು ಕೆಲವು ತಿಂಗಳ ಸಮಯ ಬೇಕಾಗಿರುವುದರಿಂದ ಇವರಿಗೆ ಸರಕಾರ ನೆರವು ನೀಡುವುದು ಅನಿವಾರ್ಯವಾಗಿದೆ. ಆದ್ದರಿಂದ   ಅತಿಸಣ್ಣ, ಸಣ್ಣ ಹಾಗೂ ಉದ್ಯಮ ಉದ್ದಿಮೆಗಳ ವಿದ್ಯುತ್ ಬಿಲ್ಲಿನ ಫಿಕ್ಸ್ಡ್ ಚಾಜ್ ಅನ್ನು ಎರಡು ತಿಂಗಳ ಅವಧಿಗೆ ಪೂರ್ತಿಯಾಗಿ ಮನ್ನಾ ಮಾಡಲಾಗುವುದು ಎಂದು ಹೇಳಿದರು.

ಬೃಹತ್ ಕೈಗಾರಿಕೆಗಳಿಗೆ ಅವರು ವಿದ್ಯುತ್ ಬಿಲ್ಲಿನ ಫಿಕ್ಸ್ಡ್ ಚಾರ್ಜ್ ನ ಪಾವತಿಯನ್ನು ಎರಡು ತಿಂಗಳ ಅವಧಿಗೆ ಯಾವುದೇ ಬಡ್ಡಿ ಅಥವಾ ದಂಡ ಇಲ್ಲದೇ ಬಡ್ಡಿ ರಹಿತವಾಗಿ ಮುಂದೂಡಲಾಗುವುದು.  ಎಲ್ಲ ಪ್ರವರ್ಗದ ಗ್ರಾಹಕರುಗಳಿಗೆ ವಿದ್ಯುಚ್ಚಕ್ತಿ  ಮೊತ್ತವನ್ನು ಪಾವತಿಸಲು ಈ ಕೆಳಕಂಡ ಸವಲತ್ತು / ಪರಿಹಾರಗಳನ್ನು ಒದಗಿಸುವುದು.

ನಿಗದಿತ ಸಮಯದೊಳಗೆ ವಿದ್ಯುತ್ ಬಿಲ್ಲಿನ ಮೊತ್ತವನ್ನು ಪಾವತಿಸುವ ಗ್ರಾಹಕರಿಗೆ ಪ್ರೋತ್ಸಾಹ ರಿಯಾಯಿತಿಯನ್ನು ನೀಡುವುದು.

ವಿಳಂಬ ಪಾವತಿಗಾಗಿ ವಿದ್ಯುತ್ ಬಿಲ್ಲಿನ ಮೊತ್ತದ ಮೇಲೆ ವಿಧಿಸುವ ಬಡ್ಡಿಯನ್ನು ಕಡಿಮೆಗೊಳಿಸಲಾಗುವುದು.

ವಿದ್ಯುತ್ ಬಿಲ್ಲಿನ ಮೊತ್ತವನ್ನು ಪಾವತಿಸುವ ಗ್ರಾಹಕರಿಗೆ ಪ್ರೋತ್ಸಾಹಧನ ನೀಡಲಾಗುವುದು. ಕಂದಾಯ ಬಾಕಿ ಮೊತ್ತವನ್ನು ಕಂತುಗಳಲ್ಲಿ/ಭಾಗವಾಗಿ ಪಾವತಿಸಲು ಅವಕಾಶ ಕಲ್ಪಿಸಲಾಗುವುದು. ಕಂದಾಯ ಬಾಕಿ ಮೊತ್ತವನ್ನು ಪಾವತಿಸದಿರುವ ಗ್ರಾಹಕರಿಗೆ 30.06.2020 ರವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ಇರುವುದು.

ಈಗಾಗಲೇ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದು ನೇಕಾರರಿಗೆ ಈ ಲಾಕ್ ಡೌನ್ ನಿಂದಾಗಿ ಮತ್ತಷ್ಟು ನಷ್ಟ ಉಂಟಾಗಿದೆ ನನ್ನ ಸರ್ಕಾರವು ಈಗಾಗಲೇ ನೇಕಾರರಿಗೆ ನೆರವಾಗಲು 109 ಕೋಟಿ ರೂ.ಗಳ ವೆಚ್ಚದಲ್ಲಿ “ನೇಕಾರರ ಸಾಲ ಮನ್ನಾ ಯೋಜನೆ”ಯನ್ನು ಘೋಷಿಸಿದೆ. ಈ ಯೋಜನೆಗೆ ಈಗಾಗಲೇ ಹಿಂದಿನ ವರ್ಷ 29 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಉಳಿದಿರುವ 80 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಿ ನೇಕಾರರಿಗೆ ಹೊಸ ಸಾಲಗಳು ದೊರಕಿಸಿಕೊಡಲು ನಾನು ಮಾಡಿಕೊಡಲಾಗುತ್ತದೆ. ಮುಂದುವರೆದು ಜನವರಿ 01 2019 ರಿಂದ ಮಾರ್ಚ್ 31, 2019 ರ ಅವಧಿಯೊಳಗೆ 1 ಲಕ್ಷ ರೂ. ಒಳಗಿನ ತಮ್ಮ ಸಾಲವನ್ನು ಮರುಪಾವತಿಸಿರುವ ನೇಕಾರರಿಗೂ ಸಹ ಅವರು ಪಾವತಿಸಿರುವ ಮೊತ್ತವನ್ನು ಮರುಪಾವತಿ ಮಾಡುವ ಮೂಲಕ ಯೋಜನೆಯ ಸೌಲಭ್ಯವನ್ನು ಒದಗಿಸಲಾಗುವುದು. ಇದಲ್ಲದೆ “ನೇಕಾರರ ಸಮ್ಮಾನ್ ಯೋಜನೆ” ಎಂಬ ಹೊಸ ಯೋಜನೆಯನ್ನು ಘೋಷಿಸಲು ಇಚ್ಛಿಸುತ್ತೇನೆ. ಈ ಯೋಜನೆಯಡಿಯಲ್ಲಿ ನಮ್ಮ ರಾಜ್ಯದಲ್ಲಿರುವ ಅಂದಾಜು 54,000 ಕೈಮಗ್ಗ ನೇಕಾರರಿಗೆ ಪ್ರತಿ ವರ್ಷ 2000/- ರೂ.ಗಳಂತೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು ಎಂದರು.

ರಾಜ್ಯದಲ್ಲಿರುವ 15.80 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರ ಪೈಕಿ ಈಗಾಗಲೇ 11.80 ಲಕ್ಷ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ 2000 ರೂ.ಗಳನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗಿರುತ್ತದೆ. ಇನ್ನುಳಿದ 4 ಲಕ್ಷ ಕಟ್ಟಡ ಕಾರ್ಮಿಕರಿಗೆ ಅವರವರ ಬ್ಯಾಂಕ್ ಖಾತೆಯ ವಿವರಗಳು ದೊರೆತ ನಂತರ 2,000 ರೂ.ಗಳನ್ನು ವರ್ಗಾಯಿಸಲು ಕ್ರಮ ಕ್ರಮವಹಿಸಲಾಗುವುದು. ಮುಂದುವರೆದು ಈ ಎಲ್ಲ ಕಟ್ಟಡ ಕಾರ್ಮಿಕರಿಗೆ ಈಗಾಗಲೇ ನೀಡಿರುವ 2,000 ರೂ.ಗಳ ಜೊತೆಗೆ ಹೆಚ್ಚುವರಿಯಾಗಿ 3,000 ರೂ.ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು. ಮೇಲ್ಕಂಡ ಎಲ್ಲ ಪರಿಹಾರ ಸೌಲಭ್ಯಗಳನ್ನು ಅಂದಾಜು ರೂ. 1610 ಕೋಟಿಗಳ ವೆಚ್ಚದಲ್ಲಿ ಮಾಡಲಾಗುವುದು ಎಂಬ ವಿವರವನ್ನು ಸಿಎಂ ಬಿಎಸ್‌ವೈ ನೀಡಿದರು.

1 Comment

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...