ಬಾಗಲಕೋಟೆ: ಉತ್ತರ ಕರ್ನಾಟಕದ ಮಹತ್ವದ ವಿಷಯವಾದ ಆಲಮಟ್ಟಿ ಜಲಾಶಯವನ್ನು 254.256 ಮೀಟರ್ ಎತ್ತರಿಸಲು ಕ್ರಮಕೈಗೊಂಡು ಈ ಭಾಗದ ಜನರಿಗೆ ನೀರಿನ ಬಳಕೆಗೆ ಅನುಕೂಲ ಮಾಡಿಕೊಡಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಿಂದ ಕಲಬುರ್ಗಿ, ಯಾದಗಿರಿ, ವಿಜಯಪುರ, ರಾಯಚೂರು ಹಾಗೂ ಬಾಗಲಕೋಟೆ ಜಿಲ್ಲೆಗಳ 6.22 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಕೃಷ್ಣಾ ಮೇಲ್ದಂಡ ಯೋಜನೆ ಇದಾಗಿದ್ದು, ಈ ಜಲಾಶಯದ ಹಿನ್ನೀರಿನಿಂದ ಬರುವ ಏತ ನೀರಾವರಿ ಯೋಜನೆಯಡಿ ನಿರಾವರಿ ಮತ್ತು ಕೆರೆ ತುಂಬಿಸುವ ಯೋಜನೆ 900 ಕ್ಯೂಸೆಕ್ ನೀರು ಬಳಸಬೇಕಾಗುತ್ತದೆ.
ಕೃಷ್ಣಾ ನ್ಯಾಯಾಧಿಕರಣ ತೀರ್ಪಿನಿ ಅನ್ವಯ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದಿಂದ ಒಟ್ಟು 130 ಟಿಎಂಸಿ ನೀರು ಹಂಚಿಕೆಗೆ ಆಲಮಟ್ಟಿ ಜಲಾಶಯದ ನೀರಿನ ಗರಿಷ್ಠ ಮಟ್ಟ ಹೆಚ್ಚಿಸುವ ಅಗತ್ಯವಿದೆ. ಇದಕ್ಕಾಗಿ ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದರು.