ಬೆಂಗಳೂರು: ಕೋವಿಡ್ ಪಿಡುಗಿನ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರ ರಾಮರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ನಾವು ಮುಂದಾಗಿದ್ದೇವೆ. ಅದರಂತೆ ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯದೊಂದಿಗೆ ಕಲ್ಯಾಣ ರಾಜ್ಯವನ್ನು ಕಟ್ಟುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
74ನೇ ಸ್ವಾತಂತ್ರ್ಯ ದಿನ ಸಂದರ್ಭದಲ್ಲಿ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಜನತೆಯನ್ನುದ್ದೇಶಿಸಿಮಾತನಾಡಿದ ಅವರು, ಕೇಂದ್ರ ಸರ್ಕಾರದ ಸ್ವಾವಲಂಬಿ ಭಾರತ ಯೋಜನೆ ಭರವಸೆಯ ಹೊಂಗಿರಣವಾಗಿದೆ. ಪ್ರಧಾನಿ ಮೋದಿಯವರ ಆಶಯದಂತೆ ಸವಾಲುಗಳನ್ನು ಅವಕಾಶವನ್ನಾಗಿ ಪರಿವರ್ತಿಸಲು ಕರ್ನಾಟಕವು ದಿಟ್ಟ ಹೆಜ್ಜೆಯನ್ನಿಡುತ್ತಿದೆ ಎಂದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಪಿಪಿಇ ಕಿಟ್ ಉತ್ಪಾದನೆಯಿಂದ ಹಿಡಿದು ಸ್ಥಳೀಯ ಉದ್ಯಮಗಳಿಗೆ ಉತ್ತೇಜನ ನೀಡುವುದು, ಸೌರ ವಿದ್ಯುತ್, ಆಟೋ ಮೊಬೈಲ್ ವಿವಿಧ ವಲಯಗಳಲ್ಲಿ ಸ್ವಾಲಂಬನೆಯ ಗುರಿ ಸಾಧಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.
ಕೊರೊನಾ ಸೋಂಕು ಆರೋಗ್ಯ ಕ್ಷೇತ್ರವಷ್ಟೇಯಲ್ಲ ಎಲ್ಲಾ ಕ್ಷೇತ್ರಗಳನ್ನು ಕಾಡಿದೆ. ಲಾಕ್ ಡೌನ್ ಕಾಲದಲ್ಲಿ ಮಂದಗತಿಗೆ ತೆರಳಿದ್ದ ನಮ್ಮ ಜೀವನ ಇಂದು ಚೇತರಿಸಿಕೊಳ್ಳುತ್ತಿದೆ. ನಾನು ಸಹ ಕೋವಿಡ್ ಸೋಂಕಿನಿಂದ ಬಾಧಿತನಾಗಿ, ಇದೀಗ ವೈದ್ಯಕೀಯ ಶುಶ್ರೋಷೆಯಿಂದ ಗುಣಮುಖನಾಗಿದ್ದೇನೆ. ನನ್ನ ಜನರು ಈ ಸೋಂಕಿನ ಬಗ್ಗೆ ಆತಂಕ ಅಥವಾ ಭಯಭೀತರಾಗುವ ಅಗತ್ಯವಿಲ್ಲ. ಜಾಗರೂಕತೆಯಿಂದ ಜೀವನ ನಡೆಸಬೇಕು ಎಂಬ ಸಲಹೆಯನ್ನು ಸಿಎಂ ನೀಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಶತಮಾನಗಳ ನಂತರ ಕಾನೂನಾತ್ಮಕವಾಗಿ ಮತ್ತು ಸೌಹಾರ್ದಯುತವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆ.5 ರಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲನ್ಯಾಸ ನೆರವೇರಿಸಿದ್ದಾರೆ. ರಾಜ್ಯದ ಯಾತ್ರಿಕರಿಗಾಗಿ ಆಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಿಸಲಾಗುವುದು ಎಂದು ಬಿಎಸ್‌ವೈ ಹೇಳಿದರು.
ಇನ್ನು ಕೊರೊನಾ ಮಹಾಮಾರಿಯಿಂದ ಉದ್ಯೋಗ ಕಳೆದುಕೊಂಡು ತಮ್ಮ ಹಳ್ಳಿಗಳತ್ತ ಹೋಗಿರುವ ಯುವಕರಿಗೆ ಅವರವರ ಹಳ್ಳಿಯಲ್ಲೇ ಉದ್ಯೋಗ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಈ ಭಾಗವಾಗಿ ಉದ್ಯೋಗ ಖಾತ್ರಿ ಯೋಜನೆಯನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail