ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕೈ ಮೀರುತ್ತಿದೆ. ಹೀಗಾಗಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಆಯೋಜಿಸಿರುವ ಸಚಿವ ಸಂಪುಟ ಸಭೆಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಕಂಟ್ರೋಲ್ ತಪ್ಪಿದೆ ಎಂದು ಒಪ್ಪಿಕೊಂಡಿದ್ದಾರೆ. ಈ ವರೆಗೂ ರಾಜ್ಯದಲ್ಲಿ ಕೊರೊನಾ ಹಿಡಿತದಲ್ಲಿದೆ ಎಂದೇ ಹೇಳಿಕೆ ನೀಡುತ್ತಿದ್ದ ಸಿಎಂ ಸ್ವತಃ ಕೊರೊನಾ ಸೋಂಕಿನ ಬಗ್ಗೆ ಸತ್ಯವನ್ನು ಬಿಚ್ಚಿಟ್ಟಿದ್ದಾರೆ.
ಇನ್ನು ಬೆಂಗಳೂರಿನ ಎಲ್ಲಾ ಜನಪ್ರತಿನಿಧಿಗಳನ್ನು ನಾಳೆ ಸಭೆ ಕರೆದು ಒಂದು ಪ್ರಮುಖ ತೀರ್ಮಾನಕ್ಕೆ ಬರುವುದಾಗಿ ಯಡಿಯೂರಪ್ಪ ತಿಳಿಸಿದರು.
Modlu neenu mule sere nimma adalitha astakke astte