ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣ ಟ್ವೀಟರ್‌ನಲ್ಲಿ ವಿಷಯತಿಳಿಸಿದ್ದು, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) August 2, 2020
Olledu bidi sir