NEWSನಮ್ಮಜಿಲ್ಲೆರಾಜಕೀಯ

ಸಿಎಂ ಬಿಎಸ್‌ವೈಗೆ ಅವರ ಕುಟುಂಬದವರೇ ಹಾವು, ಚೇಳುಗಳು:  ಯತ್ನಾಳ್‌  

ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ಯತ್ನಾಳ್‌  ತಿರುಗೇಟು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ವಿಜಯಪುರ: ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಅವರ ಕುಟುಂಬದವರೇ ಹಾವು, ಚೇಳುಗಳಾಗಿ ತೊಂದರೆ ನೀಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಜಯೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಮೈಸೂರು ಜಿಲ್ಲಾ ಘಟಕದ ಭವನ ನಿರ್ಮಾಣಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದ ವೇಳೆ ಮಾತನಾಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಹಳ ಮಂದಿ ಹಾವು ಚೇಳುಗಳ ರೀತಿ ತೊಂದರೆ ಕೊಡುತ್ತಿದ್ದಾರೆ. ಆದರೆ ಅದೇ ಹಾವು ಚೇಳುಗಳ ಮಧ್ಯೆ ಜೀವನ ಸಾಗಿಸಿ ದೊಡ್ಡ ಮಟ್ಟಕ್ಕೆ ಏರಿದ್ದಾರೆ. ಅವರಿಗೆ ಸಮಸ್ಯೆಗಳೇನು ಹೊಸದಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದರು.

ಈ ಹೇಳಿಕೆಗೆ ಯತ್ನಾಳ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೇಳೆ ತಿರುಗೇಡು ನೀಡಿದ್ದು, ಬಿಎಸ್‌ವೈಗೆ ಮುಕ್ತವಾಗಿ ಕೆಲಸ ಮಾಡಲು ವಿಜಯೇಂದ್ರ ಬಿಡುತ್ತಿಲ್ಲ. ಯಡಿಯೂರಪ್ಪ ಅವರ ಹೆಸರು ಕೆಡಿಸುತ್ತಿರುವುದು ಅವರ ಪರಿವಾರದವರೆ. ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿರುವುದರಿಂದ ಸಿಎಂ ಬದಲಾಗಿದ್ದಾರೆ ಎಂದು ಆರೋಪಿಸಿದರು.

ತಮಗೆ ಆಗದವರ ವಿರುದ್ಧ ಅಪಪ್ರಚಾರ ನಡೆಸಲು ವಿಜಯೇಂದ್ರ ಬಳಿ ನಕಲಿ ಸಿಡಿ ತಯಾರಿಸುವ ದೊಡ್ಡ ಕೇಂದ್ರವೇ ಇದೆ ಎಂದು ದೂರಿದ ಅವರು, ಯಡಿಯೂರಪ್ಪ ಕುಟುಂಬ ಇತ್ತೀಚೆಗೆ ಮಾರಿಷಸ್‌ಗೆ ವಿಮಾನದಲ್ಲಿ ಹೋಗಿದ್ದು ಏಕೆ. ಅಲ್ಲಿ ಏನು ಹಣದ ವ್ಯವಹಾರ ಇದೆ ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದರು.

1 Comment

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...