ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಅವರಿಗೆ ಕೋವಿಡ್ ಪೇಸೆಂಟ್ ನಂಬರ್ (BU-60718) ಅನ್ನು ಬಿಬಿಎಂಪಿ ಕೊಟ್ಟಿದೆ.
ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಬಿಎಸ್‌ವೈ ಅವರಿಗೆ ಕೋವಿಡ್-19 ನಿಯಮದಂತೆ Patient Number ನೀಡಲಾಗಿದೆ. ಈ ಮೂಲಕ ನಗರದಲ್ಲಿ ಎಷ್ಟು ಮಂದಿ ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದಿದ್ದಾರೆ ಎಂಬುವುದು ಸಮಗ್ರ ಮಾಹಿತಿ ದೊರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ನಡುವೆ ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ 60 ಸಾವಿರ ದಾಟಿದ್ದು ಆಗಸ್ಟ್ ಕೊನೆಯ ವೇಳೆಗೆ ಒಂದು ಲಕ್ಷಕ್ಕೂ ಅಧಿಕ ಮಂದಿಯನ್ನು ಈ ವಿಶ್ವಮಾರಿ ಕೊರೊನಾ ಬಾಧಿಸಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ.