NEWSನಮ್ಮರಾಜ್ಯರಾಜಕೀಯ

ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌ಗೆ ಸಿಎಂ ಬಿಎಸ್‌ವೈ ಚಾಲನೆ: ಸಂತಸ ಹಂಚಿಕೊಂಡ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕೆಂಬ ಉದ್ದೇಶದಿಂದ ನಾನು ಸಿಎಂ ಆಗಿದ್ದಾಗ ‘Compete With China’ ರೂಪಿಸಲಾಗಿತ್ತು. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌ ರಚಿಸಿ, ₹500 ಕೋಟಿ ಹಣ ನೀಡಲಾಗಿತ್ತು. ಸಿಎಂ ಯಡಿಯೂರಪ್ಪ ಅವರು ಆ ಕ್ಲಸ್ಟರ್‌ಗೆ ಇಂದು ಮರು ಚಾಲನೆ ನೀಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆ ಅಡಿಯಲ್ಲಿ ಆಟಿಕೆ ಉತ್ಪಾದನಾ ಘಟಕ ಆರಂಭಿಸುತ್ತಿರುವುದಾಗಿ ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ, ಕೇಂದ್ರ ಸರ್ಕಾರ ‘ಆತ್ಮನಿರ್ಭರ’ ಕಲ್ಪನೆ ಜಾರಿಗೆ ತರುವುದಕ್ಕೂ ಮೊದಲೇ ನನ್ನ ಸರ್ಕಾರ ಸ್ವಾವಲಂಬಿ ಕಲ್ಪನೆಯನ್ನು ಹೊಂದಿತ್ತು. ಅದರ ಭಾಗವಾಗಿಯೇ ಚೀನಾಕ್ಕೆ ಸೆಡ್ಡು ಹೊಡೆಯುವ ಯೋಜನೆಗಳನ್ನು ರೂಪಿಸಿತ್ತು ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

7 ಲಕ್ಷ ಕೋಟಿ ರೂ. ಮೊತ್ತದ ಜಾಗತಿಕ ಆಟಿಕೆ ಮಾರುಕಟ್ಟೆಯಲ್ಲಿ ಚೀನಾ ಪ್ರಬಲ ಹಿಡಿತ ಹೊಂದಿದೆ. ಇದರಲ್ಲಿ ಅಲ್ಪ ಪಾಲು ಕಸಿದರೂ ನಮ್ಮವರಿಗೆ ಉದ್ಯೋಗ ನೀಡಬಹುದು, ಆದಾಯ ಕೊಡಿಸಬಹುದು ಎಂಬುದು ನನ್ನ ಸರ್ಕಾರದ ದೂರದೃಷ್ಟಿಯಾಗಿತ್ತು. ಅದಕ್ಕೆ ಮರು ಚಾಲನೆ ನೀಡುತ್ತಿರುವ, ನನ್ನ ಯೋಜನೆಯನ್ನು ಅನುಸರಿಸುತ್ತಿರುವ ಯಡಿಯೂರಪ್ಪ ಅವರಿಗೆ ಆಭಿನಂದನೆಗಳು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ನನ್ನ ಸರ್ಕಾರದ ಅವಧಿಯಲ್ಲಿ ಇಂಥ ಹಲವು ಕಾರ್ಯಕ್ರಮಗಳನ್ನು ಕೊಡಲಾಗಿದೆ. ಅವುಗಳಲ್ಲಿ ಈ ನೆಲದ ಸ್ವಾಭಿಮಾನ ಸಾರುವ ಯೋಜನೆಗಳೂ ಇವೆ ಎಂಬುದು ಗಮನಾರ್ಹ. ಅವುಗಳನ್ನು ಮರಳಿ ಜಾರಿಗೆ ತರುವುದರ ಕಡೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಿಂತನೆ ನಡೆಸುವುದು ಅತ್ಯಗತ್ಯ. ನನ್ನ ಯೋಜನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ, ಆದಾಯ ಸಿಗುವ ಅಂಶಗಳು ಪ್ರಧಾನವಾಗಿವೆ ಎಂದು ವಿವರಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್