NEWSನಮ್ಮರಾಜ್ಯರಾಜಕೀಯ

ಸಿಎಂ ನಿವಾಸ ಕಾವೇರಿ, ಗೃಹ ಕಚೇರಿ ಕೃಷ್ಣಾ 14 ದಿನಗಳು ಸೀಲ್‌ಡೌನ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾ ಮತ್ತು ನಿವಾಸ ಕಾವೇರಿಗೆ 14 ದಿನಗಳ ಕಾಲ ಸಾರ್ವಜನಿಕ ಪ್ರವೇಶ ನಿಷೇಧಿಸಿದೆ.

ಇನ್ನು ಗೃಹ ಕಚೇರಿ ಕೃಷ್ಣಾ ಮತ್ತು ಕಾವೇರಿ ಅಧಿಕಾರಿಗಳು, ಸಿಬ್ಬಂದಿಗೂ ಕೋವಿಡ್‌ ಟೆಸ್ಟ್‌  ಮಾಡಿ 14 ದಿಗಳು ಅವರನ್ನು ಹೋಂ ಕ್ವಾರಂಟೈನ್‌ ಮಾಡಲಾಗುತ್ತಿದೆ.

ಸಿಎಂ ಜತೆ ಪ್ರಥಮ ಸಂಪರ್ಕದಲ್ಲಿದ್ದ ಸಚಿವರು ಉನ್ನತ ಅಧಿಕಾರಿಗಳು ಈಗಾಗಲೇ ಕೋವಿಡ್‌ ಪರೀಕ್ಷೆಗೆ ಒಳಪಟ್ಟಿದ್ದು ಅವರಲ್ಲಿ ಸಚಿವ ಗೋವಿಂದ ಕಾರಜೋಳ ಅವರ ಟೆಸ್ಟ್‌ ವರದಿ ನೆಗಿಟಿವ್‌ ಬಂದಿದೆ. ಆದರೂ ಅವರು ನಾಲ್ಕು ದಿನಗಳವರೆಗೆ ಹೋಂ ಕ್ವಾರಂಟೈನ್‌ ಆಗಲಿದ್ದಾರೆ. ಈ ನಡುವೆ ಸಿಎಂ ಗೃಹ ಕಚೇರಿ ಕೃಷ್ಣಾ ಮತ್ತು ನಿವಾಸ ಕಾವೇರಿ 11 ಮಂದಿಗೆ ಕೊರೊನಾ ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ.

ಇನ್ನು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌  ಸಿಎಂ ಅವರನ್ನು  ಕಳೆದ ಶುಕ್ರವಾರ ಮತ್ತು ಶನಿವಾರ ಭೇಟಿ ಮಾಡಿದ್ದ ಹಿನ್ನೆಲೆಯಲ್ಲಿ ಪಂತ್‌ ಅವರು ಎರಡು ದಿನ ಹೋಂ ಕ್ವಾರಂಟೈನ್‌ ಆಗಲಿದ್ದಾರೆ. ಈ ವೇಳೆ ಕರ್ತವ್ಯಕ್ಕೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ನಿರಂತರವಾಗಿ ಮಾಹಿತಿ ಪಡೆದುಕೊಳ್ಳಲಿದ್ದಾರೆ.

 

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...