ಬೆಂಗಳೂರು: ಮುಂದಿನ ಮೂರು ವರ್ಷಗಳೂ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಇರಲಿದ್ದಾರೆ. ಈ ಬಗ್ಗೆ ಯಾವುದೇ ಸಂಶಯಬೇಡ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ವಿಧಾನಸೌಧಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಸುದೀರ್ಘ ಅನುಭವ ಹೊಂದಿರುವ ಅವರು ಎಂಥದ್ದೆ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸುವ ಜಾಣ್ಮೆ ಹೊಂದಿದ್ದಾರೆ, ಹೀಗಾಗಿ ಬಿಎಸ್‌ವೈ ಬದಲಾವಣೆ ಸಾಧ್ಯವಿಲ್ಲ ಎಂದರು.
ಇನ್ನು ಸಂಪುಟ ವಿಸ್ತರಣೆ ಮಾಡುವುದು ಸಿಎಂ ಅವರ ಪರಮಾಧಿಕಾರ. ಸಮಯ ಸಂದರ್ಭ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದ ಅವರು, ಬಿಜೆಪಿ ಸರ್ಕಾರ ರಚನೆಗೆ ಸಹಕರಿಸಿದವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಹೀಗಾಗಿ ಪಕ್ಷ ಅಧಿಕಾರಕ್ಕೆ ತಂದವರು ಸಚಿವರಾಗಲಿದ್ದಾರೆ ಎಂದು ಅಶೋಕ್ ಹೇಳಿದರು.
ನಾನು ಬೆಂಗಳೂರು ನಗರವನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿಲ್ಲ. ಆದರೆ ಸಿಎಂ ನನಗೆ ಬೆಂಗಳೂರು ನಗರ ಉಸ್ತುವಾರಿ ವಹಿಸಿದ್ದಾರೆ. ಸಚಿವರ ಮಧ್ಯೆ ಯಾವುದೇ ಪೈಪೋಟಿ ಇಲ್ಲ. ಈ ಬಗ್ಗೆ ತಪ್ಪು ಕಲ್ಪನೆ ಮಾಡಿಕೊಳ್ಳುವ ಅಗ್ಯವಿಲ್ಲ ಎಂದರು.
Hwda sir en dabaktha iddare antha