- ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಹೊಸ ರೂಪದೊಂದಿಗೆ ಕಾಣಿಸಿಕೊಂಡಿರುವ ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ತಜ್ಞರ ಸಲಹೆಯೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಕ್ಷಣ ಮುನ್ನೆಚ್ಚರಿಕೆಯ ಕ್ರಮಗಳಿಗೆ ಮುಂದಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯ ನಿರ್ಲಕ್ಷ್ಯದಿಂದಾಗಿರುವ ದುಷ್ಪರಿಣಾಮದ ಪಾಠ ನೆನಪಲ್ಲಿರಲಿ. ರೂಪಾಂತರಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ತಕ್ಷಣ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಕಟ್ಟುನಿಟ್ಟಿನ ಪರೀಕ್ಷಗೆ ಒಳಪಡಿಸಬೇಕು. ಇದರಲ್ಲಿ ರಿಯಾಯಿತಿ, ವಿನಾಯಿತಿ, ನಿರ್ಲಕ್ಷ್ಯ ಸಲ್ಲದು ಎಂದು ಹೇಳಿದರು.
ರೂಪಾಂತರಿ ಕೊರೊನಾ ವೈರಸ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ಮಾಡದೆ ಕಡ್ಡಾಯವಾಗಿ ಮಾಸ್ಕ್ ಹಾಕಿ, ಸಾನಿಟೈಸರ್ ಬಳಸಿ, ದೈಹಿಕ ಅಂತರ ಕಾಪಾಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.