NEWSದೇಶ-ವಿದೇಶನಮ್ಮರಾಜ್ಯ

ಕೋವಿಶೀಲ್ಡ್ ತುರ್ತು ಬಳಕೆಗೆ ಒಪ್ಪಿದ ರಾಷ್ಟ್ರೀಯ ಔಷಧ ನಿಯಂತ್ರಕ ತಜ್ಞರ ಸಮಿತಿ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ 
    ನ್ಯೂಡೆಲ್ಲಿ:
    ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ ಆಕ್ಸ್‌ಫರ್ಡ್ ಕೋವಿಡ್ -19 ಲಸಿಕೆ ಕೋವಿಶೀಲ್ಡ್ ತುರ್ತು ಬಳಕೆಗೆ ರಾಷ್ಟ್ರೀಯ ಔಷಧ ನಿಯಂತ್ರಕದ ತಜ್ಞರ ಸಮಿತಿ ಅನುಮತಿ ನೀಡಿದೆ ಎಂದು ಶುಕ್ರವಾರ ಮೂಲಗಳು ತಿಳಿಸಿವೆ.

ವಿಶ್ವದ ಅತಿದೊಡ್ಡ ಲಸಿಕೆ ತಯಾರಕರಾದ ಪುಣೆಯ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ಕೋವಿಶೀಲ್ಡ್ ತಯಾರಿಸಲು ಆಸ್ಟ್ರಾಜೆನೆಕಾ ಜೊತೆ ಒಪ್ಪಂದ ಮಾಡಿಕೊಂಡಿದೆ.

ಬ್ರಿಟನ್ ನ ಔಷಧ ಹಾಗೂ ಆರೋಗ್ಯ ಸೇವೆಗಳ ನಿಯಂತ್ರಣ ಮಂಡಳಿಯು ಬುಧವಾರ ಸೆರಂ ಇನ್ ಸ್ಟಿಟ್ಯೂಟ್ ನ ಆಕ್ಸ್ ಫರ್ಡ್ ಆಸ್ಟ್ರಾಜೆನೆಕಾ ಲಸಿಕೆ ಬಳಕೆಗೆ ಅನುಮತಿ ನೀಡಿದ ಬೆನ್ನಲ್ಲೇ, ಭಾರತದಲ್ಲೂ ತುರ್ತು ಬಳಕೆಗೆ ಅನುಮತಿ ನೀಡಲು ತಜ್ಞರ ಸಮಿತಿ ನಿರ್ಧರಿಸಿದೆ.

ಭಾರತದಲ್ಲಿ ವೈದ್ಯಕೀಯ ಪ್ರಯೋಗಗಳನ್ನು ನಡೆಸಲು ಹಾಗೂ ಲಸಿಕೆ ತಯಾರಿಸಲು ಸೆರಮ್ ಇನ್ ಸ್ಟಿಟ್ಯೂಟ್ ಬ್ರಿಟನ್ ಕಂಪನಿಯೊಂದಿಗೆ ಪಾಲುದಾರಿಕೆ ಮಾಡಿಕೊಂಡಿದೆ. ಲಸಿಕೆಯ ತುರ್ತು ಅನುಮೋದನೆಗೆ ಸಂಬಂಧಿಸಿದಂತೆ ಡಿ. 9ರಂದು ಅರ್ಜಿ ಪರಿಶೀಲಿಸಿದ ಕೇಂದ್ರ ಔಷಧ ನಿಯಂತ್ರಣ ಸಂಸ್ಥೆಯ ತಜ್ಞರ ಸಮಿತಿ, ಲಸಿಕೆ ತಯಾರಕ ಕಂಪನಿಗಳಿಂದ ವೈದ್ಯಕೀಯ ಪ್ರಯೋಗಗಳ ಕುರಿತು ಹೆಚ್ಚುವರಿ ಅಂಕಿ ಅಂಶಗಳನ್ನು ಕೇಳಿತ್ತು. ಡಿ. 24ರಂದು ಸೆರಂ ಸಂಸ್ಥೆ ಮಾಹಿತಿಯನ್ನು ಒದಗಿಸಿತ್ತು.

ಕಲಬುರಗಿಯಲ್ಲಿ ಕೋವಿಡ್ ವ್ಯಾಕ್ಸಿನ್ ಡ್ರೈ ರನ್
ಇನ್ನು ದೇಶದಲ್ಲಿ ಮೊದಲ ಕೊರೊನಾ ಸಾವಿಗೆ ಸಾಕ್ಷಿಯಾಗಿದ್ದ ಕಲಬುರಗಿಯಲ್ಲಿ ಕೋವಿಡ್ ವ್ಯಾಕ್ಸಿನ್ ಡ್ರೈ ರನ್ ಮಾಡಲಾಗುತ್ತಿದೆ. ಕೊರೊನಾ ಸಾವಿನೊಂದಿಗೆ ದೇಶದ ಗಮನ ಸೆಳೆದಿದ್ದ ಕಲಬುರ್ಗಿ ಜಿಲ್ಲೆಯ ಮೂರು ಕಡೆ ಕೊರೊನಾ ವ್ಯಾಕ್ಸಿನ್ ಹಾಕೋ ಅಣಕು ಕಾರ್ಯಕ್ರಮ ಮಾಡಲಾಗುತ್ತಿದೆ.

ಕೋವಿಡ್ ಲಸಿಕೆ ಡ್ರೈರನ್ ಗೆ ಕಲಬುರ್ಗಿ ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಕಲಬುರಗಿ ಜಿಲ್ಲೆಯ ಮೂರು ಕಡೆ ಡ್ರೈ ರನ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಲಬುರಗಿ ಆರೋಗ್ಯ ಇಲಾಖೆಯ ಕೋಲ್ಡ್ ಸ್ಟೋರೇಜ್ ನಲ್ಲಿ 1.20 ಲಕ್ಷ ಲಸಿಕೆ ಸಂಗ್ರಹ ಸಾಮರ್ಥ್ಯವಿದೆ. ಆರೋಗ್ಯ ಇಲಾಖೆಯ ರೇಫ್ರೀಜರೇಟರ್ ನಲ್ಲಿ ಲಸಿಕೆ ಉಗ್ರಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕಲಬುರಗಿಯಲ್ಲಿ ಪ್ರಾಯೋಗಿಕವಾಗಿ ನಾಳೆ ಮೂರು ಕಡೆ ಲಸಿಕೆ ರಿಹರ್ಸಲ್ ಮಾಡಲಾಗುತ್ತಿದೆ. ಕಲಬುರಗಿ ನಗರದ ಅಶೋಕ ನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಕಲಬುರಗಿ ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ತಾಲೂಕು ಕೇಂದ್ರ ಜೇವರ್ಗಿಯ ತಾಲೂಕು ಆಸ್ಪತ್ರೆಯಲ್ಲಿ ಪ್ರಾಯೋಗಿಕ ಪರೀಕ್ಷೆ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆಯ ಕೋವಿಡ್ ಕೆಲಸಗಾರರಿಗೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುತ್ತಿದ್ದು, ಒಂದೊಂದು ಆರೋಗ್ಯ ಕೇಂದ್ರದಲ್ಲಿ 25 ಜನರಿಗೆ ಪ್ರಾಯೋಗಿಕ ಪರೀಕ್ಷೆ ಮಾಡಲಾಗುತ್ತಿದೆ.

ಪ್ರಥಮವಾಗಿ 15,900 ಆರೋಗ್ಯ ಇಲಾಖೆಯ ಕೋವಿಡ್ ವರ್ಕರ್ಸ್ ಗೆ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಈಗಾಗಲೇ ಕೋವಿಡ್ ಆ್ಯಪ್ ನಲ್ಲಿ ಹೆಸರು ನೋಂದಣಿ ಮಾಡಿದ್ದಾರೆ. ಡ್ರೈ ರನ್ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಶೇಖರ ಮಾಲಿ, ಕಲಬುರ್ಗಿಯ ಅಶೋಕ ನಗರ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು. ನಾಳಿನ ಮಾಕ್ ಟೆಸ್ಟ್ ಗೆ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್