Vijayapatha – ವಿಜಯಪಥ
Saturday, November 2, 2024
CrimeNEWSನಮ್ಮಜಿಲ್ಲೆ

ತಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದ ಅಣ್ಣನೂ ಆತ್ಮಹತ್ಯೆಗೆ ಶರಣು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ತಮ್ಮ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಣ್ಣನೂ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಎಚ್‌.ಡಿ.ಕೋಟೆ ತಾಲೂಕಿನ ಎಲೆಗುಂಡಿಯಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಗ್ರಾಮದ ವೆಂಕಟೇಶ್ (28) ಹರೀಶ್ (26) ಆತ್ಮಹತ್ಯೆ ಮಾಡಿಕೊಂಡ ಅಣ್ಣತಮ್ಮಂದಿರು. ಇವರಿಬ್ಬರ ಚಿತೆಯನ್ನು ಅಕ್ಕಪಕ್ಕದಲ್ಲಿ ಇಟ್ಟು ಅಗ್ನಿಸ್ಪರ್ಶ ಮಾಡಲಾಗಿದೆ. ಈ ದೃಶ್ಯ ಕಂಡು ಜನ ಕಣ್ಣೀರು ಹಾಕುತ್ತಿದ್ದುದ್ದು ಮನಕಲಕುವಂತಿತ್ತು.

ರೈತ ನಾಗಿದ್ದ ತಮ್ಮ ಹರೀಶ್ ಟ್ರ್ಯಾಕ್ಟರ್ ಚಾಲಕನಾಗಿದ್ದ ಹಾಗೂ ಅತಿವೇಗವಾಗಿ ಡ್ರೈವಿಂಗ್ ಮಾಡುತ್ತಿದ್ದ. ಹೀಗಾಗಿ ಹರೀಶ್ ತಂದೆ ಚಿನ್ಮಯೀಗೌಡ ಟ್ರ್ಯಾಕ್ಟರ್ ಜೋರಾಗಿ ಓಡಿಸಬೇಡ ಎಂದು ಹರೀಶ್‌ಗೆ ಬುದ್ಧಿ ಹೇಳಿದ್ದರು. ಅಲ್ಲದೇ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಅಣ್ಣ ವೆಂಕಟೇಶ್ ಕೂಡ ಹರೀಶ್ ಗೆ ಕರೆಮಾಡಿ ಈ ಬಗ್ಗೆ ಬುದ್ಧಿವಾದ ಹೇಳಿದ್ದ.

ಆತ್ಮೀಯ ನಾಗಿದ್ದ ಅಣ್ಣನೇ ಬೈದನೆಂದು ತಮ್ಮ ನೇಣಿಗೆ ಶರಣಾಗಿದ್ದಾನೆ. ಇತ್ತ ವೆಂಕಟೇಶ್ ಸ್ನೇಹಿತರು ಹರೀಶ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯಗಳನ್ನು ವೆಂಕಟೇಶ್ ಫೋನ್‌ಗೆ ಕಳುಹಿಸಿದ್ದರು. ಅದನ್ನು ನೋಡಿದ ವೆಂಕಟೇಶ್ ನನ್ನ ತಮ್ಮನ ಸಾವಿಗೆ ನಾನೇ ಕಾರಣ ಎಂದು ಊರಿಗೆ ಬಾರದೆ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ