Vijayapatha – ವಿಜಯಪಥ
Friday, November 1, 2024
CrimeNEWSಕೃಷಿ

ರೈತರನ್ನು ಉಗ್ರರಿಗೆ ಹೋಲಿಕೆ ಮಾಡಿದ ಆರೋಪ : ಸಚಿವ ಬಿ.ಸಿ. ಪಾಟೀಲ್ ವಿರುದ್ಧ ಕೇಸು ದಾಖಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಉಗ್ರರಿಗೆ ಹೋಲಿಕೆ ಮಾಡಿದ ರಾಜ್ಯದ ಕೃಷಿ ಸಚಿವ ಬಿ.ಸಿ. ಪಾಟೀಲ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ದೂರು ದಾಖಲಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

72 ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕೊಪ್ಪಳದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಸಚಿವರು, ರೈತರು ಕೆಂಪು ಕೋಟೆಗೆ ಮುತ್ತಿಗೆ ಹಾಕಿದ ಘಟನೆಯ ಹಿಂದೆ ರೈತರ ವೇಷದಲ್ಲಿ ಕಾಂಗ್ರೆಸ್ ಮತ್ತು ಪಾಕ್ ಬೆಂಬಲಿತ ಭಯೋತ್ಪಾದಕರು ಇದ್ದಾರೆ ಎಂದು ಹೇಳಿದ್ದರು.

ಹೀಗಾಗಿ ದೆಹಲಿ ಕೆಂಪುಕೋಟೆಗೆ ನುಗ್ಗಿದ್ದ ಪ್ರತಿಭಟನಾಕಾರರ ಕುರಿತು ಮಾತನಾಡಿದ್ದ ಸಚಿವ ಪಾಟೀಲ್ ದೆಹಲಿಯ ಕೆಂಪು ಕೋಟೆಗೆ ನುಗ್ಗಿದವರು ರೈತರಲ್ಲ. ಭಯೋತ್ಪಾಕರು ಎಂದು ಹೇಳಿದ್ದಾರೆ. ಇದು ಸಮಾಜದ ಶಾಮತಿ ಕದಡುವ ಯತ್ನ ಎಂದು ಆರೋಪಿಸಿದರುವ ಕಾಂಗ್ರೆಸ್‌ ಕಾರ್ಯಕರ್ತರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ತೆರೆಳಿ ಕೃಷಿ ಸಚಿವರ ವಿರುದ್ಧ ದೂರು ದಾಖಲಿಸಿದ್ದಾರೆ.

ಭಾರತೀಯ ಧ್ವಜ ಮತ್ತು ಕೆಂಪು ಕೋಟೆಗೆ ವಿಶೇಷ ಸ್ಥಾನಮಾನ ಇದ್ದು, ಸಾಂವಿಧಾನಿಕ ಪಾವಿತ್ರ್ಯವನ್ನು ಹೊಂದಿದೆ. ವಿಶೇಷವಾಗಿ ಗಣರಾಜ್ಯೋತ್ಸವದಂದು ಅವಮಾನಿಸುವುದು ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆಯಾಗಿದೆ. ಇದು ಅತ್ಯಂತ ಖಂಡನೀಯ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ರೈತರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು ಇತಿಹಾಸದಲ್ಲೇ ಇಲ್ಲ ಮತ್ತು ಇದು ಅವರ ಸಂಸ್ಕೃತಿ ಅಲ್ಲ. ಕಾಂಗ್ರೆಸ್ ಸಹಾಯದಿಂದ, ರೈತರ ವೇಷದಲ್ಲಿರುವ ಭಯೋತ್ಪಾದಕರು ಮುಂದಿನ ದಿನಗಳಲ್ಲಿ ರಾಷ್ಟ್ರದ ಗಡಿಯಲ್ಲೂ ಸೈನಿಕರ ಮೇಲೆ ದಾಳಿ ಮಾಡಬಹುದು ಎಂದು ಬಿಸಿ ಪಾಟೀಲ್ ಹೇಳಿದ್ದರು.

ಈ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ