NEWSನಮ್ಮಜಿಲ್ಲೆ

ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮರು ಸಮೀಕ್ಷಾ ಕಾರ್ಯ 15 ದಿನಗಳಲ್ಲಿ ಪೂರ್ಣಗೊಳಿಸಿ : ಮುಖ್ಯ ಆಯುಕ್ತರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2019ರಲ್ಲಿ 185 ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಸಮೀಕ್ಷೆ ಮಾಡಲಾಗಿದ್ದು, ಅದರಲ್ಲಿ 10 ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.

ಇದೀಗ ಯೋಜನಾ ವಿಭಾಗದ ವಿಶೇಷ ಆಯುಕ್ತರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿಕೊಂಡು 15 ದಿನಗಳಲ್ಲಿ ಮರು ಸಮೀಕ್ಷೆ ಮಾಡಿ ನಗರದಲ್ಲಿ ಎಷ್ಟು ಶಿಥಿಲಾವಸ್ಥೆಗೊಂಡಿರುವ ಕಟ್ಟಡಗಳಿವೆ ಎಂಬುದರ ಬಗ್ಗೆ ನಿಖರ ವರದಿ ನೀಡಬೇಕು ಎಂದು ಎಲ್ಲ ವಲಯ ಜಂಟಿ ಆಯುಕ್ತರು ಹಾಗೂ ಮುಖ್ಯ ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆ ಎಂದು ಗೌರವ್ ಗುಪ್ತ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಸಮೀಕ್ಷೆ ಮಾಡುವ ಸಂಬಂಧ ಇಂದು ವರ್ಚುವಲ್ ಮೂಲಕ ಸಭೆ ನಡೆಸಿ, ನಗರದಲ್ಲಿ 2019ರಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಸಮೀಕ್ಷೆ ಮಾಡಿರುವ ಬಗ್ಗೆ ಹಾಗೂ ಸಮೀಕ್ಷೆಯ ಪ್ರಕಾರ ಇದುವರೆಗೆ ಎಷ್ಟು ಕಟ್ಟಡಗಳಿಗೆ ನೋಟಿಸ್ ನೀಡಲಾಗಿದೆ, ಎಷ್ಟು ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ ಎಂಬುದರ ಬಗ್ಗೆ ಆಯುಕ್ತರು ಎಂಟೂ ವಲಯಗಳಿಂದ ಮಾಹಿತಿ ಪಡೆದುಕೊಂಡರು.

ನಗರದಲ್ಲಿ 2019ರಲ್ಲಿ ಮಾಡಿದ್ದ ಸಮೀಕ್ಷೆಯಲ್ಲಿ ಗುರುತಿಸಿದ್ದ 185 ಶಿಥಿಲಾವಸ್ಥೆಯ ಕಟ್ಟಡಗಳ ಪೈಕಿ ಈಗಾಗಲೇ 10 ಕಟ್ಟಡಗಳನ್ನು ನೆಲಸಮ ಮಾಡಿದ್ದು, ಬಾಕಿ 175 ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಲು ವಲಯ ಆಯುಕ್ತರು ಹಾಗೂ ವಲಯ ಜಂಟಿ ಆಯುಕ್ತರಿಗೆ ಸೂಚನೆ ನೀಡಿದರು.

ನಗರದಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಪುನರ್ ಪರಿಶೀಲಿಸುವ ಸಂಬಂಧ ಆಯಾ ವಲಯಗಳಲ್ಲಿ ಸಂಬಂಧಪಟ್ಟ ಇಂಜಿನಿಯರ್‌ಗಳು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಸ್ಥಳಕ್ಕೆ ಭೇಟಿ ನೀಡಿ ಮರು ಪರಿಶೀಲಿಸಿ ನಿಖರ ಮಾಹಿತಿಯನ್ನು ನೀಡಬೇಕು.

ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮರು ಸಮೀಕ್ಷೆ ನಡೆಸಿದ ಬಳಿಕ ಆ ಕಟ್ಟಡಗಳನ್ನು ನೆಲಸಮ ಮಾಡುವ ಸಲುವಾಗಿ 15 ದಿನಗಳಲ್ಲಿ ವಲಯವಾರು ಗುತ್ತಿಗೆದಾರರನ್ನು ನೇಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಎಲ್ಲಾ ವಲಯ ವಿಶೇಷ ಆಯುಕ್ತರುಗಳು, ಜಂಟಿ ಆಯುಕ್ತರುಗಳು, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ಎಲ್ಲಾ ವಲಯ ಮುಖ್ಯ ಅಭಿಯಂತರರು, ಎಲ್ಲ ವಿಭಾಗೀಯ ಕಾರ್ಯಪಾಲಕ ಅಭಿಯಂತರರು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

2019ರ ಸಮೀಕ್ಷೆಯ ಪ್ರಕಾರ ಶಿಥಿಲಾವಸ್ಥೆಗೊಂಡಿರುವ ಕಟ್ಟಡಗಳ ವಿವರ:

ವಲಯ – ಒಟ್ಟು ಕಟ್ಟಡ – ನೆಲಸಮವಾದ ಕಟ್ಟಡ
ದಕ್ಷಿಣ – 33 – 8
ಪೂರ್ವ – 46 – 0
ಪಶ್ಚಿಮ – 34 – 0
ಮಹದೇವಪುರ – 3 – 0
ಯಲಹಂಕ – 60 – 0
ದಾಸರಹಳ್ಳಿ – 8 – 01
ಆರ್.ಆರ್.ನಗರ – 01 – 01
ಬೊಮ್ಮನಹಳ್ಳಿ  –  0

ಒಟ್ಟು: 185  – 10

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...