NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿ ಸೇರಿದ ಶಾಸಕರ ರಾಜಕೀಯ ಭವಿಷ್ಯ ಸಮಾಧಿ : ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿ ಸೇರಿ ಸಚಿವರಾದ ಶಾಸಕರ ರಾಜಕೀಯ ಭವಿಷ್ಯ ಸಮಾಧಿ ಆಗುತ್ತದೆ ಎಂದು ಈ ಹಿಂದೆ ಸದನದಲ್ಲಿ ಹೇಳಿದ್ದೆ. ಇದೀಗ ವಲಸಿಗ ಶಾಸಕರ ಪರಿಸ್ಥಿತಿ ಅದೇ ರೀತಿ ಆಗುತ್ತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಕಾಂಗ್ರೆಸ್ ಸಮಾವೇಶದಲ್ಲಿ ಮಾಧ್ಯಮವರ ಜೊತೆ ಮಾತನಾಡಿದ ಅವರು, ವಲಸಿಗ ಶಾಸಕರು ಸೇರಿದಂತೆ ಹಲವರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಸಿಎಂ ಹಾಗೂ ಬಿಜೆಪಿಯವರಿಗೆ ರಾಜ್ಯದ ಅಭಿವೃದ್ಧಿ ಬೇಕಾಗಿಲ್ಲ, ಕಾಳಜಿ ಇಲ್ಲ. ಅವರು ಅರ್ಜೆಂಟ್ ನಲ್ಲಿ ಇದ್ದಾರೆ.

ಅವರಿಗೆ ಪವರ್ ಬೇಕಾಗಿದೆ. ಆದರೆ ವಲಸಿಗ ಶಾಸಕರ ಪರಿಸ್ಥಿತಿ ನಾನು ಈ ಹಿಂದೆ ಹೇಳಿದಂತೆ ಆಗಲಿದೆ ಎಂದು ಡಿಕೆಶಿ ಭವಿಷ್ಯ ನುಡಿದರು.

ಹಿಂದೆ 2019ರಲ್ಲಿ ಪ್ರವಾಹ ಆದಾಗಲೂ ಪರಿಹಾರ ನೀಡಿಲ್ಲ. ಈಗಲೂ ನೀಡ್ತಾರೆ ಅನ್ನೋ ನಂಬಿಕೆ ಇಲ್ಲ. ಅವರು ದೆಹಲಿಯಲ್ಲಿ ರೆಸ್ಟ್ ತೆಗೆದುಕೊಳ್ಳಲಿ. ಅವರಿಗೆ ಜನರು ಮತದಾರರು ತಕ್ಕ ಪಾಠ ಕಲಿಸುತ್ತಾರೆ ಎಂದು ಪ್ರವಾಹ ಪರಿಸ್ಥಿತಿ ನಿಭಾಯಿಸಲು ವಿಫಲವಾಗುತ್ತಿರುವ ಸರ್ಕಾರದ ಬಗ್ಗೆ ವಾಗ್ದಾಳಿ ನಡೆಸಿದರು.

ಸಾರಿಗೆ ನೌಕರರ ಜಂಟಿ ವಕಾಲತ್ತಿಗೆ ವಿದಾಯ ಹೇಳಿದ ವಕೀಲ ಶಿವರಾಜು: ಮತ್ತೆ ನೌಕರರ ಪರ ನಿಲ್ಲವರೇ ಸುಪ್ರೀಂ ಕೋರ್ಟ್‌ ವಕೀಲರು?

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...