NEWSದೇಶ-ವಿದೇಶರಾಜಕೀಯ

ಕೈ ಪಾಳೆಯದಲ್ಲಿ ತಳಮಳ ಸೃಷ್ಟಿಸಿದ ಪತ್ರ: ನಾಯಕತ್ವ ತ್ಯೆಜಿಸುವರೆ ಸೋನಿಯಾ

ಪಕ್ಷದೊಳಗಿನ ಬೇಗುದಿ ತಣಿಸಲು ಇಂದು ನ್ಯೂಡೆಲ್ಲಿಯಲ್ಲಿ ಕಾರ್ಯಕಾರಿ ಸಮಿತಿ ಸಭೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ 1947ರಿಂದಲೂ ಕಾಂಗ್ರೆಸ್‌ ಪಕ್ಷದಲ್ಲಿ ಅದರಲ್ಲೂ ರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಕುಟುಂಬದ ಪ್ರಭಾವವನ್ನು ಉಳಿಸಿಕೊಂಡು ಬಂದಿದ್ದ ಗಾಂಧಿ ಫ್ಯಾಮಿಲಿಗೆ ಈಗ ತನ್ನ ಪ್ರಭಾವ ತಗ್ಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಅದಕ್ಕೆ ಇಂಬು ನೀಡುವಂತೆ ಗಾಂಧಿ ಕುಟುಂಬದ ನಾಯಕತ್ವದ ವಿರುದ್ಧ ಕಾಂಗ್ರೆಸ್ ವಲಯದಲ್ಲೇ  ಅಪಸ್ವರ ಕೇಳಿ ಬಂದಿದ್ದು ಹೊಸದೊಂದು ರಾಜಕೀಯ ಚಟುವಟಿಕೆ ಗರಿಗೆದರಲಿದೆಯೇ ಎಂಬ ಪ್ರಶ್ನೆ ಇತರ ಪಕ್ಷಗಳ ನಾಯಕರಲ್ಲೂ ಕುತೂಹಲ ಮೂಡಿಸಿರುವುದಂತೂ ಸುಳ್ಳಲ್ಲ. ಈ ಕುತೂಹಲಕ್ಕೆ  ಇಂದು ನ್ಯೂಡೆಲ್ಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಉತ್ತರ ನೀಡಲಿದೆ.

ಇನ್ನು ಸ್ವಪಕ್ಷೀಯರೇ ಗಾಂಧಿ ಕುಟುಂಬದ ನಾಯಕತ್ವದ ಕುರಿತು ಪ್ರಶ್ನೆ ಮಾಡಿರುವುದು ಸೋನಿಯಾ ಗಾಂಧಿ ಅಸಮಾಧಾನಕ್ಕೂ ಕಾರಣವಾಗಿದ್ದು, ತಾವು ಸ್ಥಾನದಿಂದ ಕೆಳಗಿಳಿಯುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಪಕ್ಷದ ಹಿರಿಯ ನಾಯಕರು ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿರುವ  ಸೋನಿಯಾ ಗಾಂಧಿ, ತಾವು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದಿಲ್ಲ. ಪಕ್ಷದ ನಾಯಕರು ಒಟ್ಟಾಗಿ ಹೊಸ ಪಕ್ಷದ ಮುಖ್ಯಸ್ಥರನ್ನು ಆಯ್ಕೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಇಂದು (ಸೋಮವಾರ) ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಿಗದಿಯಾಗಿದ್ದು, ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯರು, ಹಾಲಿ ಸಂಸದರು, ಹಲವು ಮಾಜಿ ಕೇಂದ್ರ ಸಚಿವರನ್ನೊಳಗೊಂಡ 23 ಹಿರಿಯ ನಾಯಕರು, ಪಕ್ಷದ ಶಕ್ತಿ  ಕಡಿಮೆಯಾಗುತ್ತಿರುವುದರ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ.

ಪತ್ರದಲ್ಲಿ ರಾಜ್ಯಸಭಾ ಸದಸ್ಯ ಗುಲಾಮ್ ನಬಿ ಅಜಾದ್, ಕೇಂದ್ರ ಮಾಜಿ ಸಚಿವರಾದ ಆನಂದ್ ಶರ್ಮಾ, ಕಪಿಲ್ ಸಿಬಲ್, ಮನೀಶ್ ತಿವಾರಿ, ಶಶಿ ತರೂರ್, ಸಂಸದ ವಿವೇಕ್ ತಂಖಾ, ಎಐಸಿಸಿ ಪದಾಧಿಕಾರಿಗಳು ಮತ್ತು ಸಿಡಬ್ಲ್ಯುಸಿ ಸದಸ್ಯರು ಮುಕುಲ್  ವಾಸ್ನಿಕ್ ಮತ್ತು ಜಿತಿನ್ ಪ್ರಸಾದ ಮತ್ತು ಮಾಜಿ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರಾದ ಭೂಪಿಂದರ್ ಸಿಂಗ್ ಹೂಡಾ, ರಾಜೇಂದರ್ ಕೌರ್ ಭಟ್ಟಲ್, ಎಂ ವೀರಪ್ಪ ಮೊಯಿಲಿ, ಪೃಥ್ವಿರಾಜ್ ಚವಾಣ್, ಪಿ ಜೆ ಕುರಿಯನ್, ಅಜಯ್ ಸಿಂಗ್, ರೇಣುಕಾ ಚೌಧರಿ ಮತ್ತು ಮಿಲಿಂದ್ ದೌದಾರಿ,  ಪಿಸಿಸಿ  ಮಾಜಿ ಮುಖ್ಯಸ್ಥರಾದ ರಾಜ್ ಬಬ್ಬರ್ (ಯುಪಿ), ಅರವಿಂದರ್ ಸಿಂಗ್ ಲವ್ಲಿ (ದೆಹಲಿ) ಮತ್ತು ಕೌಲ್ ಸಿಂಗ್ ಠಾಕೂರ್ (ಹಿಮಾಚಲ್), ಬಿಹಾರ ಅಭಿಯಾನದ ಮುಖ್ಯಸ್ಥ ಅಖಿಲೇಶ್ ಪ್ರಸಾದ್ ಸಿಂಗ್, ಹರಿಯಾಣ ಮಾಜಿ ಸ್ಪೀಕರ್ ಕುಲದೀಪ್ ಶರ್ಮಾ,  ದೆಹಲಿಯ ಮಾಜಿ ಸ್ಪೀಕರ್ ಯೋಗಾನಂದ್ ಶಾಸ್ತ್ರಿ ಮತ್ತು ಮಾಜಿ ಸಂಸದ  ಸಂದೀಪ್ ದೀಕ್ಷಿತ್ ಸಹಿ ಮಾಡಿದ್ದಾರೆ.

ಪತ್ರದಲ್ಲಿ ಪಕ್ಷದ ಸಂಪೂರ್ಣ ಬದಲಾವಣೆ, ಶಕ್ತಿಯ ವಿಕೇಂದ್ರೀಕರಣ, ರಾಜ್ಯ ಘಟಕಗಳ ಸಬಲೀಕರಣ, ಎಲ್ಲಾ ಹಂತಗಳಲ್ಲಿ ಕಾಂಗ್ರೆಸ್‌ ಸಂಘಟನೆಗಳಿಗೆ ಚುನಾವಣೆ ಸೇರಿದಂತೆ ಹಲವು ವಿಷಯಗಳ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಪಕ್ಷದ ನಾಯಕ ಅಶೋಕ್‌ ಗೆಹ್ಲೋಟ್‌ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಈ ಪತ್ರ  ಬರೆದಿರುವುದು ದುರದೃಷ್ಟಕರ ಎಂದಿದ್ದು, ಈ ಪರಿಸ್ಥಿತಿಯಲ್ಲಿಸೋನಿಯಾ ಗಾಂಧಿ ಅವರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಾತ್ರವಲ್ಲದೇ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಕೂಡ ನಾಯಕತ್ವ ಬದಲಾವಣೆಗೆ ವಿರೋಧ ವ್ಯಕ್ತಪಡಿಸಿದ್ದು, ಗಾಂಧಿ ಕುಟುಂಬದ ನಾಯಕತ್ವದಿಂದಲೇ ಕಾಂಗ್ರೆಸ್ ಒಗ್ಗಟ್ಟಾಗಿದೆ. ಚುನಾವಣೆಯಲ್ಲಿನ ಸೋಲು ನಾಯಕತ್ವದ ಬದಲಾವಣೆಗೆ ಮಾರ್ಗವಲ್ಲ. ಗಾಂಧಿ ಕುಟುಂಬದ ಕಾಂಗ್ರೆಸ್ ನಾಯಕತ್ವಕ್ಕೆ ಯಾವುದೇ  ಸವಾಲನ್ನು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.

ಅಂತೆಯೇ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಕೂಡ ಗಾಂಧಿ ಕುಟುಂಬದ ಬೆಂಬಲಕ್ಕೆ ನಿಂತಿದ್ದಾರೆ. ಒಟ್ಟಾರೆ ಕಾಂಗ್ರೆಸ್​ನ ಮಾಜಿ ಮುಖ್ಯಮಂತ್ರಿಗಳು, ಮಾಜಿ ಸಂಸದರು ಸೇರಿದಂತೆ ಹಲವು ನಾಯಕರು ಪಕ್ಷದ ನಾಯಕತ್ವ ಬದಲಾವಣೆ ಮಾಡುವಂತೆ ಕೋರಿ ಬರೆದ ಪತ್ರ ಪಕ್ಷದಲ್ಲಿ ಕೋಲಾಹಲವನ್ನೇ ಎಬ್ಬಿಸಿದೆ.

1 Comment

  • Olle nayakthva guna ulla vykthi annu adyaksharannagi madi idu olleya belevanige annisuthadde

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?