NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಪೆಟ್ರೋಲ್‌ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗಿ ಆಗುತ್ತಿರುವುದನ್ನು ಖಂಡಿಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿಂದು ಪ್ರತಿಭಟನೆ ನಡೆಸಿದರು.

ನಿತ್ಯ ಜನಸಾಮಾನ್ಯರು ಬಳಸುವ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಗಗನಕ್ಕೇರಿಸಿರುವ ಕೇಂದ್ರ ಸರ್ಕಾರ, ಬೆಲೆ ನಿಯಂತ್ರಣಕ್ಕೆ ತರುವಲ್ಲಿ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು.

ಇಂದು ಪೆಟ್ರೋಲ್ ಬೆಲೆ 90 ರೂ. ಗಡಿದಾಟಿದ್ದು ಇದು ಹೀಗೆಯೇ ಮುಂದುವರಿದರೆ ಒಂದುವಾರ ಕಳೆಯುವ ಮುನ್ನವೇ 100 ರೂ. ಗಡಿ ದಾಟಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚ ಇಂಧನ ದರ ಕಡಿಮೆ ಇದ್ದು, ನಮಗೆ ಕೇವಲ 40-50 ರೂ.ಗಳಲ್ಲೇ ಪೆಟ್ರೋಲ್‌ ಮಾರಾಟ ಮಾಡಬೇಕು ಆದರೆ ಕೇಂದ್ರ ಸರ್ಕಾರ 91 ರೂ. ಸುಲಿಗೆ ಮಾಡುವ ಮೂಲಕ ಜನರ ಜೇಬಿಗೆ ನೇರವಾಗಿ ಕತ್ತರಿಹಾಕುತ್ತಿದೆ ಎಂದು ಕಿಡಿಕಾರಿದರು.

ಇಂಧನ ತೈಲ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿರುವುದನ್ನು ಖಂಡಿಸಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ನಗರದ ಮೈಸೂರು ಬ್ಯಾಂಕ್‌ ವೃತ್ತದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡು ಬೃಹತ್ ಪ್ರತಿಭಟನೆ ಮಾಡಿದರು.

ಚಟ್ಟದ ಮೇಲೆ ಬೈಕ್ ಶವಯಾತ್ರೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಜೊತೆಗೆ ರಾಜ್ಯ ಸರ್ಕಾರ ಕೂಡ ಇದನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ತಮ್ಮ ಸಿಟ್ಟನ್ನು ಹೊರಹಾಕಿದರು.

ರಸ್ತೆಯಲ್ಲೇ ಸೌದೆ ಒಲೆಮೇಲೆ ಅಡುಗೆ ಮಾಡಿದ ಕಾಂಗ್ರೆಸ್‌ ಮಹಿಳಾ ಕಾರ್ಯಕರ್ತೆಯರು ರಸ್ತೆಯಲ್ಲೆ ಊಟ ಬಡಿಸುವ ಮೂಲಕ ಇಂಧನ ಬೆಲೆಯನ್ನು ಖಡಿಸಿದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್