Vijayapatha – ವಿಜಯಪಥ
Friday, November 1, 2024
NEWSದೇಶ-ವಿದೇಶ

ಪೆಟ್ರೋಲ್‌-ಡೀಸೆಲ್‌ ಬೆಲೆಯಲ್ಲಿ ನಿರಂತರ ಹೆಚ್ಚಳ: ಸಾಮಾನ್ಯರ ಜೇಬಿಗೆ ಕೇಂದ್ರ ಸರ್ಕಾರದಿಂದ ನೇರ ಕತ್ತರಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕ್ರೂಡ್ ಆಯಿಲ್ ದರ ಕಡಿಮೆ ಇದ್ದರು ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸುತ್ತಲೆ ಇದೆ. ಇದು ಜನಸಾಮಾನ್ಯರಿಗೆ ತುಂಬ ಹೊರೆಯಾಗುತ್ತಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಹೌದು! ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಕೊರೊನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ ಸಾಮಾನ್ಯರು ಕಷ್ಟದಲ್ಲಿದ್ದರೂ, ಸಾರ್ವಜನಿಕರು ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೆ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸಿದೆ.

ಈ ಹಿನ್ನೆಲೆಯಲ್ಲಿ ನೋಡುವುದಾದರೆ ನವೆಂಬರ್ 20, 21, 22, 23, 27, 28 ಹಾಗೂ 29ರಂದು ನಿರಂತರವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಲಾಗಿತ್ತು. ಇದಾದ ಮೇಲೆ ಡಿಸೆಂಬರ್ 3ರಂದು ಮತ್ತೆ ಪೆಟ್ರೋಲ್-ಡೀಸಲ್ ಬೆಲೆ ಹೆಚ್ಚಳ ಮಾಡಲಾಗಿತ್ತು. ಇದೀಗ ಡಿಸೆಂಬರ್ 4ರಂದು ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಹೆಚ್ಚಳ ಮಾಡಲಾಗಿದೆ ಇಂಥ ಜನವಿರೊಧಿ ನಡೆಗೆಯನ್ನು ಕೇಳುವವರು ಯಾರು ಇಲ್ಲವೇ ಎಂದು ದೇಶದ ಸಾಮಾನ್ಯ ಕೇಳುತ್ತಿದ್ದಾನೆ. ಅದಕ್ಕೆ ಈವರೆಗೂ ಸರ್ಕಾರ ಸಮಂಜಸವಾದ ಉತ್ತರವನ್ನು ಕೊಡುತ್ತಿಲ್ಲ. ಬದಲಿಗೆ ತಮಗೆ ಇಷ್ಟ ಬಂದಂತೆ ಸರ್ವಾಧಿಕಾರಿ ಧೋರಣೆಯನ್ನು ತಳೆದಿದೆ ಇದು ನಿಜಕ್ಕೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾದುದು.

ಇನ್ನು ನವೆಂಬರ್ 27 ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 19 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 24 ಪೈಸೆ ಏರಿಕೆ ಮಾಡಲಾಗಿತ್ತು. ನವೆಂಬರ್ 28ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 24 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 27 ಪೈಸೆ ಏರಿಕೆ ಮಾಡಲಾಗಿತ್ತು. ನವೆಂಬರ್ 29ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 21 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಏರಿಸಲಾಗಿತ್ತು. ಡಿಸೆಂಬರ್ 2ರಂದು ಪ್ರತಿ ಲೀಟರ್ ಮೇಲೆ 15 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 23 ಪೈಸೆ ಹೆಚ್ಚಿಸಲಾಗಿತ್ತು. ಡಿಸೆಂಬರ್ 3ರಂದು ಪ್ರತಿ ಲೀಟರ್ ಮೇಲೆ 17ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 19 ಪೈಸೆ ಏರಿಸಲಾಗಿತ್ತು. ಈಗ ಡಿಸೆಂಬರ್ 4ರಂದು ಪ್ರತಿ ಲೀಟರ್ ಮೇಲೆ 20 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 23 ಪೈಸೆ ಹೆಚ್ಚಳ ಮಾಡಲಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಇದು ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಏರಿಕೆ ಆಗದಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

ಲಾಕ್​ಡೌನ್​ ಮತ್ತು ಕೊರೊನಾ ವ್ಯಾಪಕವಾಗಿ ಜನರ ಮೇಲೆ ದುಷ್ಪರಿಣಾಮ ಬೀರಿದ್ದ ಜೂನ್ ತಿಂಗಳಲ್ಲಿ ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಜುಲೈ ತಿಂಗಳಿನಲ್ಲೂ 8 ದಿನ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್‌ಗಳಲ್ಲಿ ಮಧ್ಯೆ ಮಧ್ಯೆ ಹೆಚ್ಚಳ ಮಾಡಲಾಗಿತ್ತು. ಈಗ ಡಿಸೆಂಬರ್ ತಿಂಗಳಲ್ಲಿ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗುತ್ತಿದೆ.

ಸಾಮಾನ್ಯ ಜನರ ಜೇಬಿಗೆ ಕತ್ತರಿಯಾಕುತ್ತಿರುವ ಕೇಂದ್ರ ಸರ್ಕಾರ ಆ ಹಣವನ್ನು ಏನು ಮಾಡುತ್ತಿದೆ. ದೇಶವನ್ನು ಕೊಳ್ಳೆಹೊಡೆಯುತ್ತಿರುವ ಮುಸುಕುದಾರಿಗಳ ಖಜಾನೆಯನ್ನು ತುಂಬಿಸಲು ಹೊರಟಿದೆಯೇ ಎಂಬ ಪ್ರಶ್ನೆ ಈಗ ದೇಶವಾಸಿಗಳಲ್ಲಿ ಮೂಡುತ್ತಿದೆ. ಇದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೇ ಉತ್ತರ ಕೊಡಬೇಕು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ