NEWSನಮ್ಮಜಿಲ್ಲೆ

ಬನ್ನೂರಿನಲ್ಲಿ ಸ್ಥಗಿತಗೊಂಡಿರುವ ಕೋವಿಡ್‌ ಪರೀಕ್ಷೆ ಮತ್ತೆ ಆರಂಭಿಸಿ: ಶಾಸಕರಿಗೆ ರಾಜೂಗೌಡ ಮನವಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬನ್ನೂರು: ಕೊರೊನಾ ಮಹಾಮಾರಿ ರಾಜ್ಯವನ್ನು ತೀವ್ರವಾಗಿ ಕಾಡುತ್ತಿದ್ದು, ಇದರ ನಡುವೆಯೇ ಹಲವು ಹೋಬಳಿ ಕೇಂದ್ರಗಳಲ್ಲಿ ಕೋವಿಡ್‌ ಟೆಸ್ಟ್‌ ಸ್ಥಗಿತಗೊಳಿಸಿರುವುದರಿಂದ ಸಾವಿರಾರು ಜನರಿಗೆ ತೊಂದರೆಯಾಗುತ್ತಿದೆ.

ಬನ್ನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ‌ಕೋವಿಡ್ ಪರೀಕ್ಷೆ ಸ್ಥಗಿತಗೊಳಿಸಿರುವುದರಿಂದ ಹೋಬಳಿಯ ಹಲವಾರು ಗ್ರಾಮದ ಜನರಿಗೆ ತುಂಬ ತೊಂದರೆಯಾಗುತ್ತಿದೆ. ಹೀಗಾಗಿ ಮತ್ತೆ ಕೋವಿಡ್‌ ಪರೀಕ್ಷೆ ಮಾಡುವುದನ್ನು ಪುನರ್‌ ಆರಂಭಿಸುವ ನಿಟ್ಟಿನಲ್ಲಿ ಕ್ಷೇತ್ರದ ಶಾಸಕ ಅಶ್ವಿನ್‌ಕುಮಾರ್‌ ಅವರು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರ ಪರವಾಗಿ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದ ಯುವಕ ರಾಜೂಗೌಡ ಮನವಿ ಮಾಡಿದ್ದಾರೆ.

ಈ ಹಿಂದೆ ಬನ್ನೂರಿನ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಪರೀಕ್ಷೆ ನಡೆಸುತ್ತಿದ್ದರು. ಆಗ ಈ ಭಾಗದ ಜನರಿಗೆ ತುಂಬಾ ಅನುಕೂಲಕರವಾಗಿತ್ತು, ಈಗ ಪರೀಕ್ಷೆ ಮಾಡುವುದನ್ನು ಕಳೆದ 4 ದಿನಗಳಿಂದ ನಿಲ್ಲಿಸಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಈ ಭಾಗದ ಜನರು ತಿ.ನರಸೀಪುರ ಮತ್ತು ಮೈಸೂರಿಗೆ ಹೋಗಬೇಕಾಗಿದೆ.

ಇದರಿಂದ ಹೋಬಳಿಯ ಸಾವಿರಾರು ಜನರಿಗೆ ತುಂಬ ತೊಂದರೆಯಾಗಿದೆ. ಹೀಗಾಗಿ ಮತ್ತೆ ಕೋವಿಡ್ ಪರೀಕ್ಷೆಯನ್ನು ಬನ್ನೂರಿನ ಆರೋಗ್ಯ ಕೇಂದ್ರದಲ್ಲೇ ಮೊದಲಿನಂತೆ ನಡೆಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?