Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯ

16 ಜಿಲ್ಲೆಗಳಲ್ಲಿ ಸಂಜೆ 5ರವರೆಗೆ ಅನ್‌ಲಾಕ್‌, ಮೈಸೂರು ಜಿಲ್ಲೆಯಲ್ಲಿ ನಿರ್ಬಂಧ ಮುಂದುವರಿಕೆ: ಸಿಎಂ ಘೋಷಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಅನ್‍ಲಾಕ್ ಮಾಡಲಾಗುತ್ತಿದ್ದು, 16 ಜಿಲ್ಲೆಗಳಲ್ಲಿ ಮತ್ತಷ್ಟು ನಿಯಮ ಸಡಿಲಿಕೆ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಸಿಟಿವಿಟಿ ದರದ ಆಧಾರದ ಮೇಲೆ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಹಾಗೂ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಅನ್‍ಲಾಕ್ ಮಾಡಲಾಗುತ್ತಿದೆ.

ಶೇ.5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿಬಿಎಂಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಸಂಜೆ 5 ಗಂಟೆಯವರೆಗೆ ಸಡಿಲಿಕೆ ನೀಡಲಾಗಿದೆ.

ಈ ಜಿಲ್ಲೆಗಳಲ್ಲಿ ಎಲ್ಲ ಅಂಗಡಿಗಳನ್ನು ಬೆಳಗ್ಗೆ 5 ರಿಂದ ಸಂಜೆ 5 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಎಸಿ ಹಾಕದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್‍ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5 ಗಂಟೆಯವರೆಗೆ ಶೇ.50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

ಬಸ್ ಮತ್ತು ಮೆಟ್ರೋದಲ್ಲಿ ಶೇ.50 ಸಾಮರ್ಥ್ಯದೊಂದಿಗೆ ಪ್ರಯಾಣ
ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಬಸ್ ಮತ್ತು ಮೆಟ್ರೋದಲ್ಲಿ ಶೇ.50 ಸಾಮರ್ಥ್ಯದೊಂದಿಗೆ ಪ್ರಯಾಣಿಸಬಹುದು. ಹೊರಾಂಗಣ ಕ್ರೀಡೆಗಳಿಗೆ ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.

ಸರ್ಕಾರಿ, ಖಾಸಗಿ ಕಚೇರಿಗಳಿಗೆ ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಲಾಡ್ಜ್, ರೆಸಾರ್ಟ್, ಜಿಮ್ ಗಳಲ್ಲಿ ಶೇ.50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ ಎಂದು ವಿವಸಿದರು.

ಶೇ.5ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜೂನ್ 11ರ ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.

ಶೇ.10ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರಿಯುತ್ತವೆ. ಅಲ್ಲದೆ ರಾಜ್ಯವ್ಯಾಪಿ ಅನ್ವಯವಾಗುವಂತೆ ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಇರುತ್ತದೆ.

ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಬಸ್ ಸಂಚಾರ ಶೇ.50ರಷ್ಟು ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಬಿಎಸ್‌ವೈ ತಿಳಿಸಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ