NEWSನಮ್ಮಜಿಲ್ಲೆ

ರಾಜಧಾನಿಯಲ್ಲಿ ರಸ್ತೆಗಿಳಿದ 796 ಬಿಎಂಟಿಸಿ ಬಸ್‌ಗಳು: ಮನೆಗೆ ವಾಪಸ್‌ ಹೋದ ಅರ್ಧಕರ್ಧ ಸಿಬ್ಬಂದಿ 

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿರುವುದರಿಂದ ಒಂದು ತಿಂಗಳಿಗೂ ಹೆಚ್ಚು ಕಾಲ ಕರ್ನಾಟಕದಲ್ಲಿ ಜಾರಿಯಲಿದ್ದ ಲಾಕ್​ಡೌನ್, ಜೂನ್ 20ರ ನಂತರ ಅಂದರೆ ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಸಾರಿಗೆ ಬಸ್‌ ಸಂಚಾರ ಆರಂಭವಾಗಿದ್ದು, ಬೆಳಗ್ಗೆ 8 ಗಂಟೆ ಸುಮಾರಿಗೆ 796 ಬಿಎಂಟಿಸಿ ಬಸ್‌ಗಳು ಸಂಚಾರ ಆರಂಭಿಸಿವೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಒಟ್ಟಾರೆ 2 ಸಾವಿರ ಬಿಎಂಟಿಸಿ ಬಸ್‌ಗಳ ಸಂಚಾರ ಆರಂಭವಾಗಬೇಕಿತ್ತು. ಆದರೆ, ಕೆಲ ನಿಯಮಗಳನ್ನು ನಿಗಮವು ಕಟ್ಟುನಿಟ್ಟಾಗಿ ಪಾಲಿಸುತ್ತಿರುವುದರಿಂದ ಬಸ್‌ಗಳ ಸಂಚಾರದಲ್ಲಿ ಸ್ವಲ್ಪ ವಿಳಂಬವಾಗಿದೆ. ನಾಳೆಯಿಂದ ಇಂಥ ಸಮಸ್ಯೆ ಇರುವುದಿಲ್ಲ ಎಂದು ನಿಗಮದ ಅಧಿಕಾರಿಯೊಬ್ಬರು ವಿಜಯಪಥಕ್ಕೆ ತಿಳಿಸಿದ್ದಾರೆ.

ಅದೇನೆ ಇರಲಿ ತಮ್ಮ ಚಾಲನ ಸಿಬ್ಬಂದಿ ವರ್ಗದವರನ್ನು ಈ ಮೊದಲು ವಾರದ ಹಿಂದಿ ಮಾಡಿದ ಆದೇಶದಂತೆ ವಾರದ ಹಿಂದೆ ಮಾಡಿಸಿಕೊಂಡಿರುವ RT PCR ನೆಗೆಟಿವ್‌ ವರದಿಯನ್ನು ಮಾನ್ಯಮಾಡಿದ್ದರೆ ಸಾರ್ವಜನಿಕರು ಇಷ್ಟು ತೊಂದರೆ ಅನುಭವಿಸುತ್ತಿರಲಿಲ್ಲ.

ಇಂದು ಕರ್ತವ್ಯಕ್ಕೆ ಹಾಜರಾದ ಸಾರಿಗೆ ಸಿಬ್ಬಂದಿಗೆ ಕಡ್ಡಾಯವಾಗಿ ಕಳೆದ ಶನಿವಾರವೇ ಕೋವಿಡ್‌ ಟೆಸ್ಟ್‌ ಮಾಡಿಸಿರುವ (72 ಗಂಟೆಯೊಳಗೆ) ಟೆಸ್ಟ್‌ನಲ್ಲಿ ಕೊರೊನಾ ನೆಗೆಟಿವ್‌ ವರದಿ ಬಂದಿರುವುದನ್ನು ಆಯಾಯಾ ಡಿಪೋಗಳಲ್ಲಿ ಕೊಡಬೇಕು. ಜತೆಗೆ ಝೆರಾಕ್ಸ್‌ ಮಾಡಿಸಿದ ವರದಿ ಅಂಗಿಕರಿಸಲ್ಲ, ಪ್ರಿಂಟ್‌ಔಟ್‌ ಕಾಪಿಯೇ ಬೇಕು ಎಂದು ಡಿಪೋಗಳಲ್ಲಿ ಆದೇಶ ಮಾಡಿದ್ದರಿಂದ ಕರ್ತವ್ಯಕ್ಕೆ ಬಂದಿದ್ದ ಅರ್ಧಕರ್ಧ ಸಿಬ್ಬಂದಿ ವಾಪಸ್‌ ಹೋಗುವಂತಾಯಿತು. ಸಿಬ್ಬಂದಿ ವಾಪಸ್‌ ಮನೆಗೆ ಮರಳಿದ್ದರಿಂದ ಸಮಸ್ಯೆ ಇನ್ನಷ್ಟು ಬಿಗಡಾಯಿಸಿತು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...