Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯ

ಮನೆಯಲ್ಲೇ ಕೊರೊನಾಕ್ಕೆ 778 ಬೆಂಗಳೂರಿಗರು ಬಲಿ: ಸರಕಾರವೇ ನೇರ ಹೊಣೆ ಎಂದ ನಾಗಣ್ಣ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮನೆ ಆರೈಕೆಯಲ್ಲಿದ್ದ ಕೊರೊನಾ ಸೋಂಕಿತರಿಗೆ ಸರ್ಕಾರ ಹಾಗೂ ಬಿಬಿಎಂಪಿ ವತಿಯಿಂದ ಪ್ರತಿ ದಿವಸ ಸೂಕ್ತ ವೈದ್ಯಕೀಯ ಉಪಚಾರಗಳು, ಸಹಾಯ , ಮಾರ್ಗದರ್ಶನ ಹಾಗೂ ಆರೈಕೆ ಇದ್ಯಾವುದೂ ಸಿಗದ ಕಾರಣ ಮೇ ತಿಂಗಳ 18 ದಿವಸಗಳಲ್ಲಿ 778 ಮಂದಿ ಬೆಂಗಳೂರಿಗರು ಮೃತಪಟ್ಟಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಆರೋಪಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯ ಮಾತನಾಡಿದ ಅವರು, ಈ ಎಲ್ಲಾ ಸಾವುಗಳಿಗೆ ಸರ್ಕಾರದ ಸಂಪೂರ್ಣ ಬೇಜವಾಬ್ದಾರಿತನ, ನಿರ್ಲಕ್ಷ್ಯ ತನವೇ ನೇರ ಕಾರಣವಾಗಿದೆ. ಇದು ಸರ್ಕಾರಿ ಪ್ರಾಯೋಜಿತ ಕಗ್ಗೊಲೆಗಳು ಎಂದು ದೂರಿದ್ದಾರೆ.

ಸರ್ಕಾರವು ಸೋಂಕುಪೀಡಿತರಿಗೆ ಬೆಡ್ ಗಳನ್ನು ಪೂರೈಸಲು ಅಸಹಾಯಕವಾಗಿ ಮನೆಗಳಲ್ಲಿಯೇ ಆರೈಕೆ ಪಡೆದುಕೊಳ್ಳಬೇಕೆಂದು ಹೇಳಿ ಕೇವಲ ಕೈ ತೊಳೆದುಕೊಂಡಿತೇ ಹೊರತು ಆ ರೋಗಿಗಳ ಸ್ಥಿತಿಗತಿ ಏನಾಗಿದೆ ಎಂಬ ಪರಿಶೀಲನೆಯನ್ನು ಮಾಡಲೇ ಇಲ್ಲ. ಹೋಮ್ ಐಸೊಲೇಷನ್ ಮಾರ್ಗದರ್ಶನ ಸೂತ್ರಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದೆ ಇಷ್ಟೆಲ್ಲ ಸಾವು ನೋವುಗಳಿಗೆ ಕಾರಣವಾಗಿದೆ ಎಂದು ಹೇಳಿದರು.

ಸೂಕ್ತ ಸಮಯದಲ್ಲಿ ಸೂಕ್ತ ವೈದ್ಯಕೀಯ ಸಲಹೆ ಉಪಚಾರಗಳು ಸಿಕ್ಕಿದ್ದಲ್ಲಿ ಈ ಸಾವುಗಳನ್ನು ತಡೆಯಬಹುದಾಗಿತ್ತು . ಅದನ್ನು ಬಿಟ್ಟು ಬಿಬಿಎಂಪಿ ಹಾಗೂ ಸರ್ಕಾರದ ಮಂತ್ರಿಗಳು ಬರೀ ಸುಳ್ಳುಗಳನ್ನೇ ಹೇಳಿಕೊಂಡು ಜನರನ್ನು ಮೂರ್ಖರನ್ನಾಗಿಸಲು ಹೊರಟಿದ್ದುದೇ ಈ ಎಲ್ಲಾ ಸಾವುಗಳಿಗೆ ಕಾರಣ ಎಂದು ಆರೋಪಿಸಿದರು.

ಈ ಬಗ್ಗೆ ಸರ್ಕಾರವೇ ರಚಿಸಿರುವ ಸಾವು ವಿಶ್ಲೇಷಣಾ ಸಮಿತಿ ನೀಡಿರುವ ವರದಿ ನೂರಕ್ಕೆ ನೂರು ಸತ್ಯವಾಗಿದೆ. ಆದರೆ ಬಿಬಿಎಂಪಿಯ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತೆ ಮರು ಪರಿಶೀಲಿಸಿ ವರದಿ ನೀಡುವಂತೆ ಆದೇಶ ನೀಡಿರುವುದು ನಿಜಕ್ಕೂ ದಾರಿ ತಪ್ಪಿಸುವ ಹಾಗೂ ಪ್ರಭಾವಿ ತಪ್ಪಿತಸ್ಥರನ್ನು ರಕ್ಷಿಸುವ ಹುನ್ನಾರ ಎಂದು ಕಿಡಿಕಾರಿದರು.

ಈ ಬಗ್ಗೆ ಉಚ್ಚ ನ್ಯಾಯಾಲಯವು ಮಧ್ಯ ಪ್ರವೇಶಿಸಿ ಕಾರಣಕರ್ತರಾದ ಪ್ರಭಾವಿಗಳನ್ನು ಶಿಕ್ಷಿಸಲು ಸೂಕ್ತ ಆದೇಶಗಳನ್ನು ನೀಡಬೇಕೆಂದು ಹಾಗೂ ಮುಂದಾಗುವ ಸಾವು ನೋವುಗಳನ್ನು ತಡೆಯಲು ಸೂಕ್ತ ಕಠಿಣ ನಿರ್ದೇಶನಗಳನ್ನು ಸರ್ಕಾರ ಹಾಗೂ ಬಿಬಿಎಂಪಿಗೆ ನೀಡಬೇಕೆಂದು ಆಮ್ ಆದ್ಮಿ ಪಕ್ಷವು ಕೋರಿಕೊಳ್ಳುತ್ತದೆ ಎಂದು ನಾಗಣ್ಣ ಹೇಳಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ