ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆ ಬಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಇದೇ ವೇಳೆ ಕಂದಾಯ ಸಚಿವರಾದ ಆರ್.ಅಶೋಕ ಅವರು ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಮಾಡುತ್ತಿರುವ ನಿಸ್ವಾರ್ಥ ಸೇವೆಯನ್ನು ರಾಜ್ಯ ಸರ್ಕಾರವು ಪರಿಗಣಿಸಿ, ಎಲ್ಲಾ ಮಾಧ್ಯಮ ಪ್ರತಿನಿಧಿಗಳನ್ನು ಫ್ರಂಟ್ಲೈನ್ ವಾರಿಯರ್ಸ್ ಎಂದು ಘೋಷಿಸಿದ್ದು, ಆದ್ಯತೆ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ. ಮಾಧ್ಯಮ ಪ್ರತಿನಿಧಿಗಳೆಲ್ಲರೂ ಈ ಸೌಲಭ್ಯದ ಉಪಯೋಗವನ್ನು ಪಡೆಯಬೇಕು ಎಂದು ಕೋರಿದರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಉಪ ವಿಭಾಗಾಧಿಕಾರಿ ಅರುಳ್ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ದೇವನಹಳ್ಳಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರಾದ ಎನ್.ಎಸ್.ಮಹೇಶ್, ಸಹಾಯಕ ನಿರ್ದೇಶಕರಾದ ಹೇಮಾವತಿ ಜೆ ಉಪಸ್ಥಿತರಿದ್ದರು.